ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿ ಕೊರೊನಾಗೆ ಮತ್ತೊಂದು ಬಲಿ... ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ - ವಿಜಯಪುರ ಕೊರೊನಾಗೆ ಮತ್ತೊಂದು ಬಲಿ ಸುದ್ದಿ

ಸದ್ಯ ಕೊರೊನಾ ಸೋಂಕಿತರ ಸಂಖ್ಯೆ 466ಕ್ಕೆ ಏರಿಕೆಯಾಗಿದ್ದರೆ, ಈ ಪೈಕಿ 314 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ. ಇತ್ತೀಚೆಗೆ ಸೋಂಕಿತರ ಮೂಲ ಸಂಪರ್ಕ ಹುಡುಕುವುದು ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿದೆ. ಹೆಚ್ಚಾಗಿ ಆಸ್ಪತ್ರೆಗೆ ದಾಖಲಾಗುವವರಲ್ಲಿ ಜ್ವರ, ಕೆಮ್ಮು, ನೆಗಡಿ ಇಲ್ಲವೇ ಇನ್ನಿತರ ವಯೋಸಹಜ ರೋಗಗಳು ಕಂಡು ಬಂದಿವೆ.

ವಿಜಯಪುರದಲ್ಲಿ ಕೊರೊನಾಗೆ ಮತ್ತೊಂದು ಬಲಿ
ವಿಜಯಪುರದಲ್ಲಿ ಕೊರೊನಾಗೆ ಮತ್ತೊಂದು ಬಲಿ

By

Published : Jul 3, 2020, 11:49 AM IST

ವಿಜಯಪುರ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ. ನಗರದ 57 ವರ್ಷದಶಾಹಪೇಟೆ ನಿವಾಸಿ ಕಳೆದ ನಾಲ್ಕು ದಿನಗಳ ಹಿಂದೆ ಮೃತಪಟ್ಟಿದ್ದರು. ನಂತರ ನಿನ್ನೆ ಅವರ ಗಂಟಲು ದ್ರವ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಇಲ್ಲಿಯವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿದೆ. ಮೂರು ದಿನದಲ್ಲಿ ಇದು ಮೂರನೇ ಸಾವು ಆಗಿರುವುದು ಜನತೆಯಲ್ಲಿ ಆತಂಕ ಮೂಡಿಸಿದೆ.

ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕಳೆದ ಮೂರು ದಿನದಲ್ಲಿ 106 ಪ್ರಕರಣಗಳು ದೃಢಪಟ್ಟಿರುವುದು ಇದಕ್ಕೆ ಸಾಕ್ಷಿಯಾಗಿದೆ. ಆದರೆ ಇದೇ ವೇಳೆ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಾಗಿ ಏರಿಕೆ ಕಂಡಿಲ್ಲ.

ವಿಜಯಪುರದಲ್ಲಿ ಕೊರೊನಾಗೆ ಮತ್ತೊಂದು ಬಲಿ: ಗ್ರೌಂಡ್​ ರಿಪೋರ್ಟ್​

ಸದ್ಯ ಕೊರೊನಾ ಸೋಂಕಿತರ ಸಂಖ್ಯೆ 466ಕ್ಕೆ ಏರಿಕೆಯಾಗಿದ್ದರೆ, ಈ ಪೈಕಿ 314 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ. ಇತ್ತೀಚೆಗೆ ಸೋಂಕಿತರ ಮೂಲ ಸಂಪರ್ಕ ಹುಡುಕುವುದು ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿದೆ. ಹೆಚ್ಚಾಗಿ ಆಸ್ಪತ್ರೆಗೆ ದಾಖಲಾಗುವವರಲ್ಲಿ ಜ್ವರ, ಕೆಮ್ಮು, ನೆಗಡಿ ಇಲ್ಲವೇ ಇನ್ನಿತರ ವಯೋಸಹಜ ರೋಗಗಳು ಕಂಡು ಬಂದಿವೆ.

ಜಿಲ್ಲೆಯಲ್ಲಿ ಕಂಟೇನ್ಮೆಂಟ್ ವಲಯಗಳು ಸಹ ಹೆಚ್ಚಾಗಿವೆ. ಪಾಸಿಟಿವ್ ಪ್ರಕರಣ ಕಡಿಮೆಗೊಳಿಸಲು ಜನರಲ್ಲಿ ಸಾಕಷ್ಟು ಜಾಗೃತಿ ಮೂಡಿಸಿದರೂ ಸಹ ಈಗಲೂ ಸಂತೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಬೇಕಾಬಿಟ್ಟಿಯಾಗಿ ಮನೆಯಿಂದ ಹೊರಗೆ ಬರುತ್ತಿದ್ದಾರೆ. ಇದರ ನಿಯಂತ್ರಣಕ್ಕೆ ಮತ್ತೊಮ್ಮೆ ಲಾಕ್ ಡೌನ್ ಹೇರುವದು ಸೂಕ್ತ ಎಂಬ ಮಾತುಗಳು ಕೇಳಿಬರುತ್ತಿವೆ.

ABOUT THE AUTHOR

...view details