ಕರ್ನಾಟಕ

karnataka

ETV Bharat / state

ಚೀನಾ ವಸ್ತುಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ - Karnataka Rakshana Forum Activists

ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕರವೇ ಕಾರ್ಯಕರ್ತರು ಚೀನಾ ವಿರುದ್ಧ ಘೋಷಣೆ ಕೂಗಿ ಚೀನಾ ವಸ್ತುಗಳನ್ನು ದೇಶದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

Vijayapura
ಚೀನಾ ವಸ್ತುಗಳನ್ನು ನಿಷೇಧಿಸುವಂತೆ ಮನವಿ

By

Published : Jun 22, 2020, 3:39 PM IST

ವಿಜಯಪುರ: ಚೀನಾ ವಸ್ತುಗಳನ್ನು ದೇಶದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕರವೇ ಕಾರ್ಯಕರ್ತರು ಚೀನಾ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು‌. ದೇಶದ ಗಡಿಯಲ್ಲಿ ಚೀನಾ ಉದ್ಧಟತನ ಮೆರೆಯುತ್ತಿದೆ. ಸೈನಿಕರ ಪ್ರಾಣ ಹಾನಿ ಮಾಡುತ್ತಿರುವ ಚೀನಾಗೆ ಕೇಂದ್ರ ಸರ್ಕಾರ ತಕ್ಕ ಉತ್ತರ ನೀಡುವಂತೆ ಒತ್ತಾಯಿಸಿದರು. ಇಂದು ಭಾರತೀಯ ಸೈನಿಕರ ಮೇಲೆ ಹಲ್ಲೆಗೆ ಮುಂದಾಗುತ್ತಿರುವ ಚೀನಿ ಸೈನಿಕರಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರವೇ ಕಾರ್ಯಕರ್ತರು ಸರ್ಕಾರಕ್ಕೆ ಒತ್ತಾಯಿಸಿದರು.

ಚೀನಾ ವಸ್ತುಗಳನ್ನು ನಿಷೇಧಿಸುವಂತೆ ಮನವಿ

ಗಡಿಯಲ್ಲಿ ಅಶಾಂತಿ ಉಂಟು ಮಾಡುತ್ತಿರುವ ಚೀನಾ ವಸ್ತುಗಳನ್ನು ದೇಶದಲ್ಲಿ ಬಹಿಷ್ಕಾರ ಮಾಡಿ ದೇಶದ ವಸ್ತುಗಳನ್ನು ಬಳಕೆ ಮಾಡುವಂತೆ ಜಿಲ್ಲಾಧಿಕಾರಿಗೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದರು.

ABOUT THE AUTHOR

...view details