ವಿಜಯಪುರ:ಸಾಮಾಜಿಕ ಜಾಲತಾಣಗಳಲ್ಲಿ ಮಹರ್ಷಿ ವಾಲ್ಮೀಕಿ ಅವರನ್ನು ಅವಮಾನಿಸಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಾಲ್ಮೀಕಿ ನಾಯಕ ಮಹಾಸಭಾದ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವಾಲ್ಮೀಕಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಮುಂದಾಗುವಂತೆ ಸರ್ಕಾರಕ್ಕೆ ಮನವಿ
ಮಹರ್ಷಿ ವಾಲ್ಮೀಕಿ ಅವರನ್ನು ಅವಮಾನಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಾಲ್ಮೀಕಿ ನಾಯಕ ಮಹಾಸಭಾದ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ವಾಲ್ಮೀಕಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಮುಂದಾಗುವಂತೆ ಸರ್ಕಾರಕ್ಕೆ ಮನವಿ
ಕೆಲ ಕಿಡಿಗೇಡಿಗಳು ಮಹರ್ಷಿ ವಾಲ್ಮೀಕಿ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ, ಸಮಾಜದಲ್ಲಿನ ಶಾಂತಿ ಕದಡುವ ಕಾರ್ಯ ಮಾಡುತ್ತಿದ್ದಾರೆ. ವಾಲ್ಮೀಕಿಯಂತಹ ಮಹಾನ್ ವ್ಯಕ್ತಿಗೆ ಅವಮಾನ ಮಾಡುವುದು ಸರಿಯಲ್ಲ. ಪ್ರಚೋದನಕಾರಿ ಪೋಸ್ಟ್ ಮಾಡುತ್ತಿರುವವರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ.
ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.