ಕರ್ನಾಟಕ

karnataka

ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಪ್ರತಿಭಟನೆ

By

Published : May 22, 2020, 3:10 PM IST

ಸರ್ಕಾರ ಜಾರಿ ಮಾಡಿರುವ ಎಪಿಎಂಸಿ ಕಾಯ್ದೆಯಿಂದ ರೈತರಿಗೆ ಮತ್ತು ಹಮಾಲರಿಗೆ ನಷ್ಟ ಉಂಟಾಗುತ್ತದೆ. ಅದಕ್ಕಾಗಿ ಸರ್ಕಾರ ಈ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ರೈತ ಕೃಷಿ ಕಾರ್ಮಿಕರ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

appeal-to-district-collectors-to-revoke-apmc-act
ಎಪಿಎಂಸಿ ತಿದ್ದುಪಡಿ ಕಾಯ್ದೆ

ವಿಜಯಪುರ: ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಸರ್ಕಾರ ಹಿಂಪಡೆಯುವಂತೆ ರೈತ ಕೃಷಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸರ್ಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ರೈತ ವಿರೋಧಿ ನೀತಿ ಅನುಸರಿಸಲು ಮುಂದಾಗಿದೆ. ಕಾಯ್ದೆ ಜಾರಿ ಮಾಡುವುರಿಂದ ಹಮಾಲರು‌ ಕೆಲಸ ಕಳೆದುಕೊಳ್ಳುವಂತಾಗುತ್ತದೆ. ಲಾಕ್‌ಡೌನ್ ಎಫೆಕ್ಟ್​​ನಿಂದ ಹಲವು ರೈತರು ತಮ್ಮ ಬೆಳೆಗಳನ್ನ ಮಾರಾಟ ಮಾಡಲಾಗದೆ ಕಂಗಾಲಾಗಿದ್ದಾರೆ. ಈ ಕಾಯ್ದೆ ಜಾರಿಯಿಂದ ರೈತರಿಗೆ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂದು ರೈತ ಕೃಷಿ ಕಾರ್ಮಿಕರು ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿದರು.

ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಪ್ರತಿಭಟನೆ

ಬಡ ಕಾರ್ಮಿಕರಿಗೆ ಕನಿಷ್ಠ ಜೀವನಾವಶ್ಯಕ ವಸ್ತುಗಳನ್ನು ಖರೀದಿಸಲು ಸರ್ಕಾರ 10 ಸಾವಿರ ಹಣ ನೀಡಬೇಕು. ಬಡ ರೈತರಿಗೆ ವರ್ಷವಿಡೀ ಉದ್ಯೋಗ ಒದಗಿಸಿ ಹಾಗೂ ರೈತರ ಸಾಲದ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಮತ್ತು ಕಾಯ್ದೆಯನ್ನು ಹಿಂಪಡೆಯವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ABOUT THE AUTHOR

...view details