ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿ ಕಳ್ಳತನ ಮಾಡಿ ತಲೆ ಮರೆಸಿಕೊಂಡಿದ್ದವ ಅಥಣಿಯಲ್ಲಿ ಅಂದರ್​ - ಅಸ್ಲಾಂ ಮೆಹಬೂಬ ಸನದಿ

ಮೂರ್ನಾಲ್ಕು ಮನೆಗಳಲ್ಲಿ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅಥಣಿಯಲ್ಲಿ ವಿಜಯಪುರ ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ.

ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಬಂಧನ
ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಬಂಧನ

By

Published : Jul 6, 2021, 10:18 AM IST

ವಿಜಯಪುರ: ಮನೆಗಳ್ಳತನ ಮಾಡುತ್ತಿದ್ದ ಐನಾತಿ ಕಳ್ಳನನ್ನು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಅಸ್ಲಾಂ ಮೆಹಬೂಬ ಸನದಿಯಿಂದ 5,70,500 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಆದರ್ಶನಗರ ಠಾಣಾ ವ್ಯಾಪ್ತಿಯ ಮೂರು ಮನೆಗಳಲ್ಲಿ ಆರೋಪಿ ಕಳ್ಳತನ ಮಾಡಿದ್ದ. ಬಂಧಿತನಿಂದ 125 ಗ್ರಾಂ ಚಿನ್ನ, 160 ಗ್ರಾಂ ಬೆಳ್ಳೆ ಸೇರಿ 5.70 ಲಕ್ಷ ರೂ.ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ ವಿವಿಧ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಎಸ್​ಪಿ ಅನುಪಮ್ ಅಗರ್ವಾಲ್, ಬಹುಮಾನ ಘೋಷಿಸಿದ್ದಾರೆ.

ಇದನ್ನೂ ಓದಿ:ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ.. ರಾಕ್ಷಸನಾದ ಪಕ್ಕದ ಮನೆ ವ್ಯಕ್ತಿ!

ABOUT THE AUTHOR

...view details