ವಿಜಯಪುರ:ಸಿಂದಗಿ ತಾಲೂಕಿನ ಹಚ್ಯಾಳ ಗ್ರಾಮದಲ್ಲಿಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಜನರ ಮೇಲೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಪ್ರಕರಣ: ಐವರ ವಿರುದ್ಧ ದೂರು ದಾಖಲು - vijayapura latest news
ಸಿಂದಗಿ ತಾಲೂಕಿನ ಹಚ್ಯಾಳ ಗ್ರಾಮದಲ್ಲಿ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿದ್ದ ಐವರ ವಿರುದ್ಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಪ್ರಕರಣ
ಹಚ್ಯಾಳ ಗ್ರಾಮದ ಬಾಶಾಸಾಬ್ ದಪೇದಾರ್, ಮೈಬೂಬಸಾಬ್ ದಫೆದಾರ್, ಸೊಹೇಲ್ ವಾಲಿಕಾರ್, ಸದ್ದಾಂ ದಪೇದಾರ್, ಜೈನಾಬಿ ಅರಬ್ ಎಂಬುವವರ ವಿರುದ್ಧ ಐಪಿಸಿ ಸೆಕ್ಷನ್ 353, 504, 506ರ ಅನ್ವಯ ಪ್ರಕರಣ ದಾಖಲು ಮಾಡಲಾಗಿದೆ.
ಇಂದು ಮಧ್ಯಾಹ್ನ ಸಿಂದಗಿ ತಾಲೂಕಿನ ಹಚ್ಯಾಳ ಗ್ರಾಮದಲ್ಲಿ ಆಶಾ ಕಾರ್ಯಕರ್ತೆ ಸಾವಿತ್ರಿ ಬಡಿಗೇರ್ ಮೇಲೆ ಐವರು ಹಲ್ಲೆಗೆ ಯತ್ನ ನಡೆಸಿದ್ದರು. ತಮ್ಮ ಏರಿಯಾಗೆ ಪದೇ ಪದೆ ಯಾಕೆ ಬರ್ತೀರಿ ಎಂದು ವಾಗ್ವಾದ ನಡೆಸಿ ಹಲ್ಲೆಗೆ ಯತ್ನಿಸಲಾಗಿತ್ತು. ಇದೀಗ ಐವರು ಆರೋಪಿಗಳ ಬಂಧನಕ್ಕೆ ಸಿಂದಗಿ ಪೊಲೀಸರು ಬಲೆ ಬೀಸಿದ್ದು, ಘಟನೆ ಬಳಿಕ ಐವರು ಆರೋಪಿಗಳು ಪರಾರಿಯಾಗಿದ್ದಾರೆ.