ವಿಜಯನಗರ: ಪಿಎಮ್ ಕೇರ್ ಫಾರ್ ಚಿಲ್ಡ್ರನ್ ಯೋಜನೆ ಅಡಿಯಲ್ಲಿ ವಿಜಯನಗರ ಜಿಲ್ಲೆಯ ಹಂಪಸಾಗರದ ಇಬ್ಬರು ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ ದೊರಕಿಸಿಕೊಡಲು ಜಿಲ್ಲಾಡಳಿತ ಮುಂದಾಗಿದೆ. ಹಂಪಸಾಗರ ಗ್ರಾಮದ ನಿವಾಸಿಗಳಾದ ಅಂಬಿಗರ ಪ್ರಜ್ವಲ್, ಅಂಬಿಗರ ಖುಷಿ ಎಂಬಿಬ್ಬರು ಮಕ್ಕಳಿಗೆ ಸರ್ಕಾರದಿಂದ ಉಚಿತ ಶಿಕ್ಷಣ ಸೌಲಭ್ಯ ದೊರೆಯಲಿದೆ. ಸದ್ಯ ಇವರು 5ನೇ ಮತ್ತು 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರಿಗೆ 23 ವರ್ಷ ತುಂಬುವಾಗ ಬ್ಯಾಂಕ್ ಖಾತೆಗೆ 10 ಲಕ್ಷ ರೂ ಹಣ ಜಮೆ ಆಗಲಿದೆ. ಇದರ ಜೊತೆಗೆ ಉನ್ನತ ವ್ಯಾಸಂಗಕ್ಕೂ ಜಿಲ್ಲಾಡಳಿತ ಅಗತ್ಯ ನೆರವು ನೀಡಲಿದೆ.
ಕೋವಿಡ್: ಅನಾಥ ಮಕ್ಕಳ ಶಿಕ್ಷಣದ ಜವಾಬ್ದಾರಿ ವಹಿಸಿಕೊಂಡ ಜಿಲ್ಲಾಡಳಿತ - PM Care for Children scheme
ಕೋವಿಡ್‌ನಿಂದಾಗಿ ತಮ್ಮ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಪಿಎಂ ಕೇರ್ ಫಾರ್ ಚಿಲ್ಡ್ರನ್ ಯೋಜನೆ ಅಡಿಯಲ್ಲಿ ವಿದ್ಯಾಭ್ಯಾಸ ನೀಡುವ ಹೊಣೆಯನ್ನು ವಿಜಯನಗರ ಜಿಲ್ಲಾಡಳಿತ ವಹಿಸಿಕೊಂಡಿದೆ.
![ಕೋವಿಡ್: ಅನಾಥ ಮಕ್ಕಳ ಶಿಕ್ಷಣದ ಜವಾಬ್ದಾರಿ ವಹಿಸಿಕೊಂಡ ಜಿಲ್ಲಾಡಳಿತ assistance-for-orphaned-children-under-the-pm-care-for-children-scheme](https://etvbharatimages.akamaized.net/etvbharat/prod-images/768-512-15431213-thumbnail-3x2-yyy.jpg)
ಕೋವಿಡ್ ನಿಂದಾಗಿ ಪೋಷಕರನ್ನು ಕಳೆದುಕೊಂಡ ಅನಾಥ ಮಕ್ಕಳ ಶಿಕ್ಷಣದ ಜವಾಬ್ದಾರಿ ವಹಿಸಿಕೊಂಡ ಜಿಲ್ಲಾಡಳಿತ
ಈ ಮಕ್ಕಳಿಗೆ ಕೇಂದ್ರೀಯ ವಿದ್ಯಾಲಯ, ನವೋದಯ ಅಥವಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವ್ಯಾಸಂಗಕ್ಕೆ ಅನುವು ಮಾಡಲಾಗುವುದು ಎಂದು ಡಿಸಿ ಹೇಳಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ವೀರನಗೌಡ, ಜಿಲ್ಲಾ ಸಂರಕ್ಷಣಾಧಿಕಾರಿ ಎಳೆ ನಾಗಪ್ಪ ಇನ್ನಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ:ಕುಡಿಯುವ ನೀರಿನ ಯೋಜನೆ ಹಣ ನಕಲಿ ಬ್ಯಾಂಕ್ ಖಾತೆಗಳಿಗೆ ರವಾನೆ ಕೇಸ್; ತನಿಖೆಗೆ ಹೈಕೋರ್ಟ್ ತಡೆ