ವಿಜಯಪುರ : ಜಿಲ್ಲೆಯ ಪ್ರಮುಖ ವ್ಯಾಪಾರಿ ಮೇಲೆ ಮುಸುಕುಧಾರಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಡರಾತ್ರಿ ಚಡಚಣ ಪಟ್ಟಣದಲ್ಲಿ ನಡೆದಿದೆ.
ಮುಸುಕುಧಾರಿಗಳಿಂದ ಬಟ್ಟೆ ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ - kannada news
ವ್ಯಾಪಾರ ಮುಗಿಸಿ ಹಣ ತೆಗೆದುಕೊಂಡು ಸಿಬ್ಬಂದಿ ಜತೆ ಬೈಕ್ನಲ್ಲಿ ತೆರಳುತ್ತಿದ್ದ ಜಿಲ್ಲೆಯ ಪ್ರಮುಖ ವ್ಯಾಪಾರಿ ಮೇಲೆ ಮುಸುಕುಧಾರಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಜಿಲ್ಲೆಯ ಚಡಚಣ ಪಟ್ಟಣದ ಬಾಹುಬಲಿ ಮುತ್ತಿನ ಬಟ್ಟೆ ಅಂಗಡಿ ಮಾಲೀಕ ಅಜೀತ್ ಮುತ್ತಿನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ವ್ಯಾಪಾರ ಮುಗಿಸಿ ಹಣ ತೆಗೆದುಕೊಂಡು ಸಿಬ್ಬಂದಿ ಜತೆ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಬೈಕ್ ಹಿಂದೆ ಕುಳಿತ ಸಿಬ್ಬಂದಿ ಪಾರಾಗಿದ್ದಾನೆ. ಆದರೆ ಅಜಿತ್ಗೆ ಗಂಭೀರ ಗಾಯಗಳಾಗಿದ್ದು, ಮಹಾರಾಷ್ಟ್ರದ ಸೋಲಾಪುರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಹೊಸ ಅಂಗಡಿಯಿಂದ ಹಳೆಯ ಅಂಗಡಿಗೆ ಲಕ್ಷಾಂತರ ಹಣ ತೆಗೆದುಕೊಂಡು ಹೋಗುವಾಗ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಮುಸುಕುಧಾರಿಗಳು ಪರಾರಿಯಾಗಿದ್ದಾರೆ. ಆದರೆ ಗಾಯಾಳು ಬಳಿಯಿದ್ದ ಹಣ ಕದ್ದಿರುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.