ವಿಜಯಪುರ:ಕೊರೊನಾ ವೈರಸ್ ನಿಯಂತ್ರಣಕ್ಕೆ ಅಗತ್ಯ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರದ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವೈದ್ಯಕೀಯ ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆಗೆ ಆಗ್ರಹಿಸಿ ಪ್ರತಿಭಟನೆ - ಸರ್ಕಾರ ವೈದ್ಯಕೀಯ ಉಪಕರಣ ಖರೀದಿ ಭ್ರಷ್ಟಾಚಾರ ಸಿಬಿಐ ತನಿಖೆ ಮಾಡುವಂತೆ ಪ್ರತಿಭಟನೆ
ವೈದ್ಯಕೀಯ ಉಪಕರಣಗಳ ಖರೀದಿಯ ವ್ಯವಹಾರದಲ್ಲಿ 2,200 ಕೋಟಿ ರೂ. ಅವ್ಯವಹಾರ ಆರೋಪವಿದ್ದು ಸಿಬಿಐ ಮೂಲಕ ಪ್ರಕರಣದ ತನಿಖೆ ನಡೆಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ನಗರದ ಜಿಲ್ಲಾಧಿಕಾರಿ ಮುಂಭಾಗದಲ್ಲಿ ಸೇರಿದ ಪ್ರತಿಭಟನಾಕಾರರು, ಪಿಪಿಇ ಕಿಟ್, ವೆಂಟಿಲೇಟರ್, ಮಾಸ್ಕ್ ಸೇರಿದಂತೆ ಹಲವು ವೈದ್ಯಕೀಯ ಸಂಬಂಧಿ ಉಪಕರಣವನ್ನ ರಾಜ್ಯ ಸರ್ಕಾರ 1,163 ಕೋಟಿ ರೂ. ಕೊಟ್ಟು ಖರೀದಿ ಮಾಡಿದೆ. ಆದ್ರೆ ಲೆಕ್ಕದಲ್ಲಿ 3,392 ಕೋಟಿ ರೂ. ಪಾವತಿಸಿರೋದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಪ್ರತಿಭಟನಾಕಾರರು ರಾಜ್ಯ ಸರ್ಕಾರ ವಿರುದ್ಧ ಹರಿಹಾಯ್ದರು. ಆರೋಗ್ಯ, ವೈದ್ಯಕೀಯ ಹಾಗೂ ಶಿಕ್ಷಣ ಸಚಿವರುಗಳು ದಿನಕ್ಕೊಂದು ಹೇಳಿಕೆ ನೀಡಿ ಜನರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದರು.
ಸರ್ಕಾರ ಕೊರೊನಾ ಸಂಬಂಧಿತ ಖರ್ಚು ವೆಚ್ಚಗಳ ಕುರಿತು ಸರ್ಕಾರ ಶ್ವೇತ ಪತ್ರ ಹೊರಡಿಸಬೇಕು. ಜನರಿಗೆ ನೀಡಿದ ಸಹಾಯಧನ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವಂತೆಯೂ ಆಗ್ರಹಿಸಿ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.