ವಿಜಯಪುರ :ಭೀಮಾತೀರದ ಸಾಹುಕಾರ ಮಹಾದೇವ ಭೈರಗೊಂಡ ಅವರನ್ನುಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ತಡರಾತ್ರಿ ಆ್ಯಂಬುಲೆನ್ಸ್ ಮೂಲಕ ಬಿಗಿ ಭದ್ರತೆಯಲ್ಲಿ ಅವರನ್ನು ಹೈದರಾಬಾದ್ಗೆ ಕರೆದುಕೊಂಡು ಹೋಗಲಾಗಿದೆ.
ಆದರೆ, ಈ ಕುರಿತು ಈಟಿವಿ ಭಾರತದೊಂದಿಗೆ ಮಾತನಾಡಿದ ಎಸ್ಪಿ ಅನುಪಮ್ ಅಗರವಾಲ್, ವಿಜಯಪುರದ ಬಿಎಲ್ಡಿಇ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರ ಮಾಡಲಾಗಿದೆ. ಆದರೆ, ಭದ್ರತೆ ದೃಷ್ಟಿಯಿಂದ ಯಾವ ಕಡೆ ಸ್ಥಳಾಂತರ ಮಾಡಲಾಗಿದೆ ಎಂಬ ಮಾಹಿತಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.