ಮುದ್ದೇಬಿಹಾಳ(ವಿಜಯಪುರ): ತಾಲೂಕಿನ ರೂಢಗಿ ತಾಂಡಾದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಬಂಜಾರ ಸಮುದಾಯದವರ ವಿರುದ್ಧ ಸಂವಿಧಾನ ವಿರೋಧಿ ನಿಲುವು ಅನುಸರಿಸುತ್ತಿದ್ದಾರೆ ಎಂದು ತಾಂಡದ ಜನ ಆರೋಪಿಸಿದ್ದಾರೆ.
ಲಂಬಾಣಿ ಜನಾಂಗವನ್ನು ಎಸ್ಸಿ ಪಟ್ಟಿಯಿಂದ ಕೈಬಿಡದಂತೆ ಸರ್ಕಾರ ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ಆಗ್ರಹಿಸಿ ಹಮ್ಮಿಕೊಂಡಿದ್ದ ಪತ್ರ ಚಳವಳಿ ಪ್ರತಿಭಟನೆಯಲ್ಲಿ ಬಂಜಾರ ಸಮಾಜದ ಮುಖಂಡ ಎಸ್.ಪಿ.ಸೇವಾಲಾಲ್ ಮಾತನಾಡಿದರು. ಡಿಸಿಎಂ ಗೋವಿಂದ ಕಾರಜೋಳ ಅವರು ಬಂಜಾರರನ್ನು ಎಸ್ಸಿ ಪಟ್ಟಿಯಿಂದ ಕೈ ಬಿಡುವಂತೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಇದೇ ವೇಳೆ ಡಿಸಿಎಂ ವಿರುದ್ಧ ಧಿಕ್ಕಾರ ಕೂಗಿದರು.