ವಿಜಯಪುರ:ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ನಗರದಲ್ಲಿಂದು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೊಷಣೆ ಕೂಗಿದರು.
ವಿಜಯಪುರದಲ್ಲಿ ಬ್ಯಾಂಕ್ ನೌಕಕರ ಪ್ರತಿಭಟನೆ - ಬ್ಯಾಂಕ್ ನೌಕಕರ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ವಿಜಯನಗರದಲ್ಲಿಂದ ಬ್ಯಾಂಕ್ ಉದ್ಯೋಗಿಗಳು ಪ್ರತಿಭಟನೆ ನಡೆಸಿದ್ದಾರೆ.
ಬ್ಯಾಂಕ್ ನೌಕಕರ ಪ್ರತಿಭಟನೆ
ನಗರದ ಸ್ಟೇಷನ್ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಮುಂಭಾಗದಲ್ಲಿ ಬ್ಯಾಂಕ್ ನೌಕರರೆಲ್ಲಾ ಸೇರಿ ಪ್ರತಿಭಟನೆ ನಡೆಸಿದರು. ಅನೇಕ ವರ್ಷಗಳಿಂದ ವೇತನ ಹೆಚ್ಚಿಸುವಂತೆ ಬ್ಯಾಂಕ್ ನೌಕರರು ಸರ್ಕಾರಕ್ಕೆ ಮನವಿ ಮಾಡಿದರು. ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ನೌಕಕರಿಗೆ ಯಾವುದೇ ಸೌಲಭ್ಯಗಳನ್ನು ನೀಡಿಲ್ಲ ಎಂದು ಪ್ರತಿಭಟನಾ ನಿರತ ಬ್ಯಾಂಕ್ ನೌಕರರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇದೇ ವೇಳೆ ತಕ್ಷಣವೇ ಕೇಂದ್ರ ಸರ್ಕಾರ ಬ್ಯಾಂಕ್ ನೌಕಕರ ಬೇಡಿಕೆಗೆ ಸ್ಪಂದಿಸಿ ವೇತನ ಸೇರಿದಂತೆ ಅನೇಕ ಬೇಡಿಕೆಗಳನ್ನ ಈಡೇರಿಸುವಂತೆ ಪ್ರತಿಭಟನಾಕಾರು ಒತ್ತಾಯಿಸಿದರು.