ವಿಜಯಪುರ: ಕೊರೊನಾ ಎಮರ್ಜೆನ್ಸಿ ಹಿನ್ನೆಲೆ ತಮ್ಮ ಮೂರು ತಿಂಗಳ ವೇತನ ಸರ್ಕಾರಕ್ಕೆ ನೀಡಲು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಿರ್ಧರಿಸಿದ್ದಾರೆ.
ಕೊರೊನಾ ಆರ್ಥಿಕ ದಿಗ್ಬಂಧನ: ಸಿಎಂ ಪರಿಹಾರ ನಿಧಿಗೆ 3 ತಿಂಗಳ ವೇತನ ನೀಡಿದ ಯತ್ನಾಳ್
ರಾಜ್ಯದಲ್ಲಿ ಕೊರೊನಾ ಪರಿಣಾಮ ಆರ್ಥಿಕತೆ ಕುಸಿತ ಕಂಡಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಮೂರು ತಿಂಗಳ ವೇತನ ಪಡೆಯುವಂತೆ ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ.
ತಮ್ಮ ಮೂರು ತಿಂಗಳ ವೇತನ ಪಡೆಯುವಂತೆ ಸಿಎಂಗೆ ಶಾಸಕ ಯತ್ನಾಳ್ ಪತ್ರ ಬರೆದಿದ್ದು, ಅದರ ಪ್ರತಿಯನ್ನು ತಮ್ಮ ಅಧಿಕೃತ ಫೇಸ್ಬುಕ್ ಅಕೌಂಟ್ನಲ್ಲಿ ಪ್ರಕಟಿಸಿದ್ದಾರೆ. ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ನಿಧಿಗೆ ತಮ್ಮ ವೇತನ ಪಡೆಯುವಂತೆ ಪತ್ರ ಬರೆದಿದ್ದಾರೆ.
ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ, ಅವರಿಗೆ ಸಹಾಯಕವಾಗಲಿ. ಕೊರೊನಾದಿಂದ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಈ ಸಮಯದಲ್ಲಿ ನಾವು ಆರ್ಥಿಕವಾಗಿ ಸರ್ಕಾರದ ಬೆಂಬಲಕ್ಕೆ ನಿಲ್ಲಬೇಕಿದೆ. ಇದಕ್ಕಾಗಿ ನನ್ನ ಮೂರು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಪಡೆಯಬೇಕೆಂದು ಸಿಎಂಗೆ ಯತ್ನಾಳ್ ಮನವಿ ಮಾಡಿದ್ದಾರೆ.