ಕರ್ನಾಟಕ

karnataka

ETV Bharat / state

Yatnal: ಲೋಕಸಭೆ ಚುನಾವಣೆಗೆ ಮೊದಲು ಅಥವಾ ನಂತರ ಕಾಂಗ್ರೆಸ್ ಸರ್ಕಾರ ಪತನ ಖಚಿತ: ಶಾಸಕ ಯತ್ನಾಳ್ - ಸಿಎಂ​​ ವಿರುದ್ಧ ಯತ್ನಾಳ್​ ವಾಗ್ದಾಳಿ

Basanagowda Patil Yatnal: ಲೋಕಸಭೆ ಚುನಾವಣೆಗೆ ಮೊದಲು ಅಥವಾ ನಂತರ ಕಾಂಗ್ರೆಸ್​​ ಸರ್ಕಾರ ಪತನಗೊಳ್ಳುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಭವಿಷ್ಯ ನುಡಿದಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

By

Published : Aug 14, 2023, 6:55 PM IST

Updated : Aug 14, 2023, 8:18 PM IST

ಶಾಸಕ ಯತ್ನಾಳ್ ಹೇಳಿಕೆ

ವಿಜಯಪುರ:ರಾಜ್ಯದಲ್ಲಿ ಆಡಳಿತ ಹಿಡಿದ ಕಾಂಗ್ರೆಸ್​ ಪಕ್ಷ ಮೂರು ತಿಂಗಳಿನ ಹಿಂದಿದ್ದ ಹಾಗೆ ಇಲ್ಲ. ಇನ್ನು ಆರು ತಿಂಗಳಲ್ಲಿ ಪಕ್ಷದ ಹಣೆಬರಹ ಏನಾಗಲಿದೆ ಎಂಬುದನ್ನು ನೀವೇ ನೋಡಿ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದರು. ನಗರದಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್​​ ಅಧಿಕಾರಕ್ಕೆ ಬಂದಮೇಲೆ ಭ್ರಷ್ಟಾಚಾರ ವ್ಯಾಪಕವಾಗಿದೆ. ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಓರ್ವ ಗುತ್ತಿಗೆದಾರ ಡಿಸಿಎಂ ಡಿಕೆಶಿ ಅವರಿಗೆ ಸವಾಲು ಹಾಕಿದ್ದಾರೆ. ನೀವು ಎಲ್ಲ ಗುತ್ತಿಗೆದಾರರಲ್ಲಿ ಶೇ 15 ಕಮಿಷನ್​ ಕೇಳಿದ್ದೀರಿ. ಈ ಬಗ್ಗೆ ನಿಮ್ಮ ಗುರುಗಳಾದ ಅಜ್ಜಪ್ಪಯ್ಯ ಅವರ ಮಠಕ್ಕೆ ಬಂದು ಪ್ರಮಾಣ ಮಾಡಿ ಎಂದು ಸವಾಲು ಎಸೆದಿದ್ದಾರೆ. ಆದರೆ ಡಿಕೆಶಿ ಇನ್ನೂ ಉತ್ತರಿಸಿಲ್ಲ ಎಂದರು.

ಈ ಹಿಂದೆ ಈಶ್ವರಪ್ಪನವರ ಮೇಲೆ ಆಪಾದನೆ ಬಂದಾಗ ಅವರು ನಿರಪರಾಧಿಯಾಗಿದ್ದರೂ ರಾಜೀನಾಮೆ ನೀಡಿದ್ದರು. ಇದೇ ರೀತಿಯ ನಿರ್ಧಾರವನ್ನು ಸಿದ್ದರಾಮಯ್ಯ ತೆಗೆದುಕೊಳ್ಳುವರೇ?. ಗುತ್ತಿಗೆದಾರರು ಗಂಭೀರವಾದ ಆರೋಪಗಳನ್ನು ಮಾಡಿದ್ದಾರೆ. ನೈತಿಕತೆ ಇದ್ದರೆ ಕೂಡಲೇ ಡಿಕೆಶಿ​ ರಾಜಿನಾಮೆ ನೀಡಬೇಕು ಎಂದು ಹೇಳಿದರು.

ಬೆಂಗಳೂರು ಮಹಾನಗರದಲ್ಲಿ ಸಿಎಂ ಅವರದ್ದು ಏನೂ ನಡೀತಿಲ್ಲ. ಡಿಕೆಶಿ ಎಲ್ಲ ಶಾಸಕರುಗಳ ಬಾಯಿ ಮುಚ್ಚಿಸಿ ಹಗಲು ದರೋಡೆ ನಡೆಸುತ್ತಿದ್ದಾರೆ ಎಂದು ಗುತ್ತಿಗೆದಾರರು ಹೇಳುತ್ತಿದಾರೆ. ಸಿಎಂ ಅಸಹಾಯಕತೆ ತೋರಿಸುತ್ತಿದ್ದಾರೆ. ಕಮಿಷನರ್​ ಗ್ರೇಡ್​ಗೆ ಅರ್ಹತೆ ಇಲ್ಲದವರನ್ನು ಆ ಹುದ್ದೆಗೆ ನೇಮಕ ಮಾಡಿದ್ದಾರೆ. ಇದರ ಉದ್ದೇಶ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸುವುದೇ ಆಗಿದೆ. ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್​ ಈ ರೀತಿಯ ಕೆಟ್ಟ ವರ್ತನೆಯನ್ನು ಜಿಲ್ಲೆಯಲ್ಲಿ ನಡೆಸುತ್ತಿದ್ದಾರೆ. 5 ವರ್ಷಗಳ ಕಾಲ ಸರ್ಕಾರ ಆಡಳಿತದಲ್ಲಿರುತ್ತದೆ ಎಂದು ಅವರು ಭಾವಿಸಿದ್ದಾರೆ.

ಆದರೆ​ ಸರ್ಕಾರ ಲೋಕಸಭೆ ಚುನಾವಣೆಗೆ ಮೊದಲು ಅಥವಾ ನಂತರ ಪತನಗೊಳ್ಳುವುದು ಖಚಿತ. ನೀವು ಮನೆಗೆ ಹೋಗುವುದು ನಿಶ್ಚಿತ. ಇಂದು ರಾಜ್ಯದಲ್ಲಿ ವರ್ಗಾವಣೆ ದಂಧೆ, ಪಂಚ ಗ್ಯಾರಂಟಿ ಯೋಜನೆಯಲ್ಲಿ ಮೋಸ, ಶಾಸಕರಲ್ಲಿನ ಅಸಮಾಧಾನ ಹಾಗೂ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದೇ ಇರುವುದು ಕಾಂಗ್ರೆಸ್​ ಪತನಕ್ಕೆ ಕಾರಣವಾಗಲಿದೆ. ಈ ಗಾಗಲೇ 135 ಶಾಸಕರ ಪೈಕಿ ಸಚಿವರಾಗಿದ್ದವರನ್ನು ಹೊರತುಪಡಿಸಿ ಉಳಿದ ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆ ಇನ್ನೂ ಎರಡು ಮೂರು ತಿಂಗಳಲ್ಲಿ ಕಾಂಗ್ರೆಸ್​ ಸರ್ಕಾರ ಪತನಗೊಳ್ಳಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭವಿಷ್ಯ ನುಡಿದರು.

ಇದನ್ನೂ ಓದಿ:ಹೆಚ್​ಡಿಕೆಗೆ ನನ್ನ ಕಂಡರೆ ಭಯನಾ, ನನಗೆ ಅವರ ಕಂಡರೆ ಭಯನಾ ಎಂಬುದು ಚುನಾವಣೆಯಲ್ಲಿ ಗೊತ್ತಾಗುತ್ತೆ: ಸಚಿವ ಚಲುವರಾಯಸ್ವಾಮಿ

Last Updated : Aug 14, 2023, 8:18 PM IST

ABOUT THE AUTHOR

...view details