ವಿಜಯಪುರ: ಕೋವಿಡ್-19 ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಪಕ್ಕದ ಮಹಾರಾಷ್ಟ್ರದ ಪರಿಸ್ಥಿತಿ ಬರುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಕ್ರೋಶ ಹೊರಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ ಯತ್ನಾಳ್ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಮತದಾನದ ನಂತರ ಏ.18 ರಂದು ಸಿಎಂ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ. ಮತದಾನಕ್ಕೂ ಮುಂಚಿತವಾಗಿ ಯಾಕೆ ಕರೆದಿಲ್ಲ ಎಂದು ಪ್ರಶ್ನಿಸಿದರು.
ಉಪಚುನಾವಣೆ ನಡೆಯುವ ಕ್ಷೇತ್ರ ಬಿಟ್ಟು ಬೇರೆ ಕಡೆ ಕಟ್ಟು ನಿಟ್ಟು ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮಹಾರಾಷ್ಟ್ರ ಸರ್ಕಾರವನ್ನು ಮೀರಿಸುವಷ್ಟು ಕೊರೊನಾ ಪ್ರಕರಣಗಳು ಹೆಚ್ಚಾಗಲಿದೆ. ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡುವ ಅನಿವಾರ್ಯತೆ ಬರಬೇಕಾಗುತ್ತದೆ. ಸಾರ್ವಜನಿಜರು ಸಹ ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಲಸಿಕೆ ಕೊರತೆ ಇಲ್ಲ, ಈಗಾಗಲೇ ಕೇಂದ್ರ ಸರ್ಕಾರ ರಷ್ಯಾ ಸೇರಿ ವಿದೇಶಿಗಳಿಂದ ಹೆಚ್ಚುವರಿ ಲಸಿಕೆ ತರಿಸಿಕೊಳ್ಳುತ್ತಿದೆ. ಅದರ ಬಗ್ಗೆ ಭಯ ಬೇಡ, ಕೊರೊನಾ ಕಟ್ಟಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಜತೆ ಸಿಎಂ ಯಡಿಯೂರಪ್ಪ ಮಾತುಕತೆ ನಡೆಸಿ ಲಾಕ್ಡೌನ್ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದರು.