ವಿಜಯಪುರ:ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ 3 ವರ್ಷಗಳ ಕಾಲ ಸಿಎಂ ಆಗಿರ್ತಾರೆ ಎಂದು ನಾನೇನೂ ಹೇಳುವುದಿಲ್ಲ ಎನ್ನುವ ಮೂಲಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಿಎಂ ಜತೆಗಿನ ತಮ್ಮ ಮುನಿಸನ್ನು ಮುಂದುವರೆಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ಸಚಿವರಂತೆ ಸೂರ್ಯ, ಚಂದ್ರರಿರುವಷ್ಟು ದಿನ ಸಿಎಂ ಆಗಿರ್ತಾರೆ ಎಂದು ಹೇಳಲ್ಲ ಎನ್ನುವ ಮೂಲಕ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಯತ್ನಾಳ್ ತುಪ್ಪ ಸುರಿದಿದ್ದಾರೆ. ನಾನ್ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿಲ್ಲ, ಅನುದಾನ ಬಿಡುಗಡೆ ಮಾಡದಿರುವದನ್ನು ಪ್ರಶ್ನಿಸಿದ್ದೇನೆಯೇ ಹೊರತು, ಪಕ್ಷ ವಿರೋಧಿ ಹೇಳಿಕೆ ನೀಡಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.