ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಕ್ರಮಕ್ಕೆ ಮುಂದಾಗುವಂತೆ ಯತ್ನಾಳ ಬೆಂಬಲಿಗರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶಾಸಕ ಯತ್ನಾಳ್ಗೆ ಜೀವ ಬೆದರಿಕೆ ಹಾಕಿದ ಆರೋಪ: ಸೂಕ್ತ ಕ್ರಮಕ್ಕೆ ಮನವಿ - ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪುರ ನಗರದ ಶಾಸಕ ಯತ್ನಾಳ್ಗೆ ಓರ್ವ ಯುವಕ ಕೊಲೆ ಬೆದರಿಕೆ ಹಾಕಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಯತ್ನಾಳ ಬೆಂಬಲಿಗರು ಮನವಿ ಸಲ್ಲಿಸಿದರು.
ನಗರದ ಗೋಲಗುಂಬಜ್ ಪೊಲೀಸ್ ಠಾಣೆ ಆವರಣದಲ್ಲಿ ಸಾಮಾಜಿಕವಾಗಿ ವಿಜಯಪುರ ನಗರದ ಶಾಸಕ ಯತ್ನಾಳ್ಗೆ ಓರ್ವ ಯುವಕ ಕೊಲೆ ಬೆದರಿಕೆ ಹಾಕಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಒಬ್ಬ ಪ್ರಭಾವಿ ನಾಯಕನಿಗೆ ರಕ್ಷಣೆ ಇಲ್ಲದಂತಾಗಿದೆ. ಬೆದರಿಕೆ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ. ತಕ್ಷಣವೇ ಆತನ ವಿಚಾರಣೆ ಮಾಡಿ, ಇಂತಹ ಕೃತ್ಯದಲ್ಲಿ ಭಾಗಿಯಾದ ಕಿಡಿಗೇಡಿಗಳಿಗೆ ತಕ್ಕ ಪಾಠ ಕಲಿಸಲು ಮುಂದಾಗುವಂತೆ ಯತ್ನಾಳ್ ಬೆಂಬಲಿಗರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದರು.
ಇನ್ನು ಕೊಲೆ ಬೆದರಿಕೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.