ವಿಜಯಪುರ: ಮಂಗಳೂರು ವಿಮಾನ ನಿಲ್ದಾಣ ಬಳಿ ಬಾಂಬ್ ಪತ್ತೆ ಪ್ರಕರಣ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಮಂಗಳೂರು ಏರಪೋರ್ಟ್ನಲ್ಲಿ ಸಿಕ್ಕ ಬಾಂಬ್ ಅಣಕು ಪ್ರದರ್ಶನದಂತಿತ್ತು ಎನ್ನುವ ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆ ನಾಚಿಕೇಡಿನ ಸಂಗತಿ. ಕುಮಾರಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರಿಗೆ ಸರ್ಕಾರದಿಂದ ಮಾನಸಿಕ ಚಿಕಿತ್ಸೆ ನೀಡುವ ಅವಶ್ಯಕತೆ ಇದೆ ಎಂದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಸಿಎಂ ಆಗಿದ್ದೆ ಅಣುಕ ಪ್ರದರ್ಶನದಂತಿತ್ತು. ಅವರಿಗೆ ದೇಶ, ಸೈನಿಕರು, ರಾಜ್ಯದ ಹಿತ ಯಾವುದೂ ಕಾಣುವುದಿಲ್ಲ. ಕುಮಾರಸ್ವಾಮಿ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲು ಯತ್ನಿಸಿದ ವ್ಯಕ್ತಿ ಆದಿತ್ಯರಾವ್ ಆತ ಓರ್ವ ಹಿಂದು. ಆತನ ಬಂಧನವಾಗಿದೆ. ಪೊಲೀಸ್ ಇಲಾಖೆ ಉತ್ತಮ ಕಾರ್ಯ ಮಾಡಿದೆ ಎಂದು ಶ್ಲಾಘಿಸಿದರು.
ನಿನ್ನೆ ಕಲಬುರ್ಗಿಯಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮಾಡಿದ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ್ ಅವರ ಭಾ಼ಷಣ ಪಾಕಿಸ್ತಾನದ ಲೀಡರ್ ತರ ಇತ್ತು. ದಾವುದ್ ಇಬ್ರಾಹಿಂ ತಮ್ಮ ರಾಹುಲ್ ಗಾಂಧಿ, ಇಮ್ರಾನ್ ಖಾನ ಅಳಿಯ ಕುಮಾರಸ್ವಾಮಿ ಎಂಬಂತೆ ಇತ್ತು ಎಂದು ವ್ಯಂಗ್ಯವಾಡಿದರು.