ವಿಜಯಪುರ: ಸಿಂದಗಿ ಬಿಸಿಎಂ ವಸತಿ ನಿಲಯಗಳ ತಾಲೂಕು ವಿಸ್ತೀರ್ಣಾಧಿಕಾರಿ ಹಾಸ್ಟೆಲ್‌ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ಅರೋಪಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.
ವಸತಿ ನಿಲಯದ ಸಿಬ್ಬಂದಿಗೆ ಕಿರುಕುಳ ಆರೋಪ... ಬಿಸಿಎಂ ವಿಸ್ತೀರ್ಣಾಧಿಕಾರಿ ವಿರುದ್ಧ ಪ್ರತಿಭಟನೆ - latest protest news
ಸಿಂದಗಿ ತಾಲೂಕು ವಿಸ್ತೀರ್ಣಾಧಿಕಾರಿ ವಸತಿ ನಿಲಯದ ಸಿಬ್ಬಂದಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಾಜ್ಯ ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲಾ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.
ಸಿಂದಗಿ ತಾಲೂಕು ವಿಸ್ತೀರ್ಣಾಧಿಕಾರಿ ವಸತಿ ನಿಲಯದ ಸಿಬ್ಬಂದಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಅಧಿಕಾರಿ ವಿರುದ್ಧ ಕಿಡಿಕಾರಿದರು. ಅಧಿಕಾರಿ ಅಸಭ್ಯ ವರ್ತನೆ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಈವರೆಗೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ, ಮಹಿಳೆಯರು ವಸತಿ ನಿಲಯಗಳಿಗೆ ಕೆಲಸ ಮಾಡಲು ಭಯದಲ್ಲಿ ಹೋಗುವ ವಾತಾವರಣ ನಿರ್ಮಾಣವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗಲೇ ಈ ಅಧಿಕಾರಿ ವಿರುದ್ಧ ಮೇಲ್ವಿಚಾರಕಿಗೆ ಕಿರುಕುಳ ನೀಡಿದ ಆರೋಪವಿತ್ತು ಎಂದು ಪ್ರತಿಭಟನಾಕಾರರು ಹೇಳಿದರು.
ಅಸಭ್ಯ ವರ್ತನೆ ಮಾತ್ರವಲ್ಲದೆ ಭ್ರಷ್ಟಾಚಾರ ಆರೋಪಗಳಿದ್ದು, ಸಂಬಂಧಿಸಿದ ಅಧಿಕಾರಿಗಳು ಸಿಂದಗಿ ಬಿಸಿಎಂ ತಾಲೂಕು ವಿಸ್ತೀರ್ಣಾಧಿಕಾರಿ ವಿರುದ್ಧ ಕ್ರಮಕ್ಕೆ ಮುಂದಾಗುವಂತೆ ಪ್ರತಿಭಟನಾಕಾರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.