ಕರ್ನಾಟಕ

karnataka

ETV Bharat / state

ಬೆಳಗಾವಿ- ಶೇ.94ರಷ್ಟು ಸೋಂಕಿತರ ಗುಣಮುಖ: ಮರಣ ಪ್ರಮಾಣದಲ್ಲಿ ಇಳಿಕೆ

ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಯ ಇಂದಿನ ಕೊರೊನಾ ಅಂಕಿ-ಅಂಶ ಹೀಗಿದೆ.

Belagavi and Vijayapura corona update
ಸಾಂದರ್ಭಿಕ ಚಿತ್ರ

By

Published : Oct 24, 2020, 10:02 PM IST

ಬೆಳಗಾವಿ:ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಪೈಕಿ ಶೇ.94 ರಷ್ಟು ಜನರು ಗುಣಮುಖರಾಗಿದ್ದು, ಕಳೆದ 15 ದಿನಗಳಲ್ಲಿ ಮರಣ ಪ್ರಮಾಣ ಶೇ.0.4 ಕ್ಕೆ ಇಳಿಮುಖಗೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಈ ಕುರಿತು ಶನಿವಾರ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಇದುವರೆಗೆ 24,039 ಜನರಿಗೆ ಕೋವಿಡ್-19 ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ. ಒಟ್ಟು ಸೋಂಕಿತರ ಪೈಕಿ 23,020 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ 961 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಒಟ್ಟು 328 ಜನರು ಸೋಂಕಿನಿಂದ ಮರಣ ಹೊಂದಿದ್ದು, ಮರಣ ಪ್ರಮಾಣವು ಕಳೆದ 15 ದಿನಗಳಲ್ಲಿ ಶೇ.0.4 ಹಾಗೂ ಇತ್ತೀಚಿನ 7 ದಿನಗಳಲ್ಲಿ ಶೇ. 0.5 ರಷ್ಟಿದೆ.

ಸೋಂಕಿತರ ಪ್ರಮಾಣ ಶೇ. 5.4

ಜಿಲ್ಲೆಯಲ್ಲಿ ನಿತ್ಯ 2,300 ಜನರನ್ನು ಕೋವಿಡ್-19 ಪರೀಕ್ಷೆ ಮಾಡಲಾಗುತ್ತಿದ್ದು, ಸೋಂಕಿತರ ಪ್ರಮಾಣ ಶೇ.5.4 ರಷ್ಟಿದೆ. ಆದರೆ, ಕಳೆದ ಮೂರು ದಿನಗಳಲ್ಲಿ ಇದು ಶೇ.3.7 ಗೆ ಇಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಕೆಲವು ಕೋವಿಡ್ ಆಸ್ಪತ್ರೆಗಳು ಕೂಡ ಸ್ಥಗಿತಗೊಂಡಿದ್ದು, ಆಕ್ಸಿಜನ್ ಬೇಡಿಕೆಯು‌ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ಕೋವಿಡ್-19 ಪ್ರಮಾಣ ಇಳಿಮುಖವಾಗುತ್ತಿದ್ದರೂ ಸಾರ್ವಜನಿಕರು ಗರಿಷ್ಠ ಮುನ್ನೆಚ್ಚರಿಕೆ ವಹಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದರ ಜತೆಗೆ ನಿಯಮಿತವಾಗಿ ಸ್ಯಾನಿಟೈಸರ್ ಬಳಕೆ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಎಂದಿದ್ದಾರೆ.

ವಿಜಯಪುರ ಜಿಲ್ಲೆಯ ವರದಿ:

ವಿಜಯಪುರ ಜಿಲ್ಲೆಯಲ್ಲಿ ಇಂದು 62 ಹೊಸದಾಗಿ ಪಾಸಿಟಿವ್ ದೃಢವಾಗಿದೆ. ಇಲ್ಲಿವರೆಗೆ 12,036 ಜನರಿಗೆ ಸೋಂಕು ತಗುಲಿದೆ. ಇಂದು ಕೊರೊನಾದಿಂದ 81 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾ‌ದವರ ಸಂಖ್ಯೆ 11,407ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಇವುಗಳ ಸಂಖ್ಯೆ 191ಕ್ಕೆ ಏರಿಕೆಯಾಗಿದೆ.

ವಿಜಯಪುರ ಜಿಲ್ಲಾ ಆಸ್ಪತ್ರೆ

ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 438 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 1,35,227 ಜನರ ಮೇಲೆ ನಿಗಾ ಇಡಲಾಗಿದೆ. 1,34,465 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,19,820 ಜನರ ವರದಿ ನೆಗೆಟಿವ್ ಆಗಿದೆ. 12,036 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 2,611 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ABOUT THE AUTHOR

...view details