ವಿಜಯಪುರ: ಡ್ರಗ್ಸ್ ಮಾಫಿಯಾದಲ್ಲಿ ಎಷ್ಟೇ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ರು ಅವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವಂತೆ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಿಜಯಪುರ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಡ್ರಗ್ ಮಾಫಿಯಾ ಮಟ್ಟ ಹಾಕುವಂತೆ ಮನವಿ - Vijayapura latest news 2020
ಡ್ರಗ್ಸ್ ಸೇವನೆಯಿಂದ ಅನೇಕ ಯುವಕರು ವ್ಯಸನಿಗಳಾಗುತ್ತಿದ್ದಾರೆ. ಇದರಲ್ಲಿ ನಟ-ನಟಿಯರು ಕೂಡ ಭಾಗಿಯಾಗಿರುವುದು ಕಂಡು ಬರುತ್ತಿದ್ದು. ಗಾಂಜಾ ಸೇವನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಹಳ್ಳಿಯವರೆಗೆ ಹಬ್ಬಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾರ್ಯಕರ್ತರು ಆತಂಕ ವ್ಯಕ್ತಪಡಿಸಿದರು.
ಡ್ರಗ್ಸ್ ಸೇವನೆಯಿಂದ ಅನೇಕ ಯುವಕರು ವ್ಯಸನಿಗಳಾಗುತ್ತಿದ್ದಾರೆ. ನಟ-ನಟಿಯರು ಕೂಡ ಇದರಲ್ಲಿ ಭಾಗಿಯಾಗಿರುವುದು ಕಂಡು ಬರುತ್ತಿದ್ದು. ಗಾಂಜಾ ಸೇವನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಹಳ್ಳಿಯವರೆಗೆ ಹಬ್ಬಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಾಜ್ಯ ಸರ್ಕಾರ ಗಾಂಜಾ ಮಾರಾಟಗಾರರ ಮಟ್ಟ ಹಾಕುವ ಕ್ರಮಕ್ಕೆ ಮುಂದಾಗಬೇಕು. ಅಲ್ಲದೇ ಈ ಜಾಲದಲ್ಲಿ ಕೆಲವು ಪ್ರಭಾವಿಗಳ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಹೀಗಾಗಿ ಅವರೆಲ್ಲರನ್ನು ಮಟ್ಟ ಹಾಕುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
ಹಾಗೆಯೇ, ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುತ್ತಿರುವ ಡ್ರಗ್ಸ್ ಕುರಿತು ಅಧಿಕಾರಿಗಳು ಮಾಹಿತಿ ನೀಡುತ್ತಿದ್ದು, ಇದನ್ನು ಸರ್ಕಾರ ತಡೆಯಬೇಕು. ರಾಜ್ಯದಲ್ಲಿ ಡ್ರಗ್, ಗಾಂಜಾ ಇತ್ಯಾದಿ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿರ್ಣಾಮ ಮಾಡಿದಾಗ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವೆಂದು ಬಿಜೆಪಿ ಪಕ್ಷದ ಯುವ ಪಡೆ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.