ವಿಜಯಪುರ:ಕಬ್ಬಿನ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಕೊಪ್ಪ ತಾಂಡಾ ಬಳಿ ನಡೆದಿದೆ. ಬೈಕ್ ಸವಾರ ರಮೇಶ್ ಚವ್ಹಾಣ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕೊಪ್ಪಳದ ಗಂಗಾವತಿಯ ಅಗ್ನಿಶಾಮಕ ಠಾಣೆಯಲ್ಲಿ ಫೈರ್ಮನ್ ಆಗಿದ್ದ ಎನ್ನಲಾಗುತ್ತಿದೆ.
ಟ್ರ್ಯಾಕ್ಟರ್-ಬೈಕ್ ನಡುವೆ ಡಿಕ್ಕಿ: ಸ್ಥಳದಲ್ಲೇ ಬೈಕ್ ಸವಾರ ಸಾವು - ಮುದ್ದೇಬಿಹಾಳದಲ್ಲಿ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ
ಕಬ್ಬಿನ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಕೊಪ್ಪ ತಾಂಡಾ ಬಳಿ ನಡೆದಿದೆ.
ಟ್ರಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ
ರಮೇಶ ಮೂಲತಃ ತಾಳಿಕೋಟೆ ಭಾಗದವನಾಗಿದ್ದು, ಕೊಪ್ಪ ತಾಂಡಾದಲ್ಲಿ ಮದುವೆಯೊಂದರಲ್ಲಿ ಪಾಲ್ಗೊಳ್ಳಲು ಬಂದಿದ್ದ. ಇನ್ನು ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.