ವಿಜಯಪುರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ-ಬಾಗಲಕೋಟೆ ರಾಜ್ಯ ಹೆದ್ದಾರಿ 218ರಲ್ಲಿ ಸಂಭವಿಸಿದೆ.
ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - rider dies
ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ-ಬಾಗಲಕೋಟೆ ರಾಜ್ಯ ಹೆದ್ದಾರಿ 218ರ ಮುಳವಾಡ ಗ್ರಾಮದ ಬಳಿ ಸಂಭವಿಸಿದೆ. ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಸವಾರ ಸ್ಥಳದಲ್ಲೇ ಸಾವು
ಮುಳವಾಡ ಗ್ರಾಮದ ಬಳಿ ಹಾದು ಹೋಗುವ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಮನಗೂಳಿ ಗ್ರಾಮದ ಮಹಾಂತೇಶ ನಾಟಿಕಾರ (41) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಹಿಂಬದಿ ಕುಳಿತ ಗಿರಿಮಲ್ಲಪ್ಪ ನರಸನಗೌಡ(54) ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.