ವಿಜಯಪುರ:ನಿಂತಿದ್ದಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿ, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಜಿಲ್ಲೆಯ ಇಂಡಿ ತಾಲೂಕಿನ ನಾದಖೇಡಿ ಗ್ರಾಮದ ಬಳಿ ತಡರಾತ್ರಿ ಈ ಘಟನೆ ನಡೆದಿದೆ.
ವಿಜಯಪುರ ನಿವಾಸಿ ರಾಹುಲ್ (21) ಮೃತ ಬೈಕ್ ಸವಾರ. ಇನ್ನೋರ್ವ ಗಾಯಾಳು ಹೆಸರು ತಿಳಿದು ಬಂದಿಲ್ಲ. ಅತಿ ವೇಗವಾಗಿ ಬೈಕ್ ಚಲಾಯಿಸುತ್ತಿದ್ದ ರಾಹುಲ್ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗ್ತಿದೆ.