ವಿಜಯಪುರ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಸಿಂದಗಿ: ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು - Sindagi Police Station
ವಿಜಯಪುರ ಜಿಲ್ಲೆಯ ಸಿಂದಗಿ ಬಳಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದಾನೆ.
ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
ನಿತೀನ್ ಪಾಂಡ್ರೆ (26) ಮೃತ ವ್ಯಕ್ತಿ. ಸಿಂದಗಿ ಆಲಮೇಲ ರಸ್ತೆಯಲ್ಲಿ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.