ಕರ್ನಾಟಕ

karnataka

ETV Bharat / state

ಉಪಚುನಾವಣೆ: ಮತದಾನದ ಹಕ್ಕು ಚಲಾಯಿಸಿದ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಹಾಗೂ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ತಮ್ಮ ಮತ ಚಲಾಯಿಸಿದರು.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ
ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ

By

Published : Oct 30, 2021, 11:44 AM IST

ವಿಜಯಪುರ: ಸಿಂದಗಿ ತಾಲೂಕಿನ ದೇವಣಗಾಂವ ಮತಗಟ್ಟೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಹಾಗೂ ಗಣಿಹಾರ ಗ್ರಾಮದ ಮತಗಟ್ಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಮತ ಚಲಾಯಿಸಿದರು.

ಉಪ ಚುನಾವಣೆ ಹಿನ್ನೆಲೆಯಲ್ಲಿ ಮತಕ್ಷೇತ್ರದ ಚಾಂದಕವಡೆ ಗ್ರಾಮದ ಮತಗಟ್ಟೆ142 ರಲ್ಲಿ 90 ವರ್ಷದ ವೃದ್ಧೆ ಗುರುಬಾಯಿ ಉಡುಚಣ ಅವರನ್ನು ಮಗ ಹಾಗೂ ಮೊಮ್ಮಗ ಬೈಕ್​ನಲ್ಲಿ ಕರೆದುಕೊಂಡು ಬಂದು, ಮತ ಚಲಾಯಿಸಲು ಸಹಾಯ ಮಾಡಿದರು.

ಇನ್ನು ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಹಾನಗಲ್ ಪಟ್ಟಣದ ಪದವಿ ಪೂರ್ವ ಕಾಲೇಜಿನ ಮತಗಟ್ಟೆ 89ರಲ್ಲಿ ಮತದಾನ ಮಾಡಿದರು. ಪತ್ನಿ ಉಷಾ ಜೊತೆ ಆಗಮಿಸಿ ಕೈ ಅಭ್ಯರ್ಥಿ ತಮ್ಮ ಹಕ್ಕು ಚಲಾಯಿಸಿದರು. ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ತಮ್ಮ ಸಂಗಡಿಗರ ಜೊತೆ ಆಗಮಿಸಿ ಮತದಾನ ಮಾಡಿದರು. ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್ ಮತ ಹಾನಗಲ್ ಕ್ಷೇತ್ರದಲ್ಲಿ ಇಲ್ಲದ ಕಾರಣ ಮತಗಟ್ಟಿಗಳಿಗೆ ತೆರಳಿ ಮತದಾನ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದರು. ಮತದಾರರು ಮುಂಜಾನೆ 7 ರಿಂದ ಉತ್ಸುಕರಾಗಿ ಮತದಾನ ಮಾಡುತ್ತಿದ್ದಾರೆ. ವಿಕಲಚೇತನರು, ವಯೋವೃದ್ಧರು ಸಹ ಮತ ಕೇಂದ್ರಕ್ಕೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಹಾನಗಲ್ ಕ್ಷೇತ್ರದ ಮೂರು ಮತಕೇಂದ್ರಗಳಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಮತದಾನ ವಿಳಂಬವಾಗಿ ಆರಂಭವಾಯಿತು. ಕ್ಷೇತ್ರದ 263 ಮತಗಟ್ಟಿಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಮುಂಜಾನೆ 9ಗಂಟೆಗೆ ಪ್ರತಿಶತ 8.77 ರಷ್ಟು ಮತದಾನವಾಗಿದೆ.

ABOUT THE AUTHOR

...view details