ವಿಜಯಪುರ: ಭಾರತೀಯ ರಾಷ್ಟ್ರೀಯ ಸಂಘ (ಆರ್‌ಎಸ್‌ಎಸ್) ಹಾಗೂ ಬಿಜೆಪಿ ತಾಲಿಬಾನ್ ಸಂಸ್ಕೃತಿ ಹೊಂದಿವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವಿಜಯಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೊಚಬಾಳ, ಇದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರ್‌ಎಸ್‌ಎಸ್ ಒಂದು ಶಿಸ್ತುಬದ್ಧ ಸಂಘಟನೆ. ದೇಶದ ಅಭಿವೃದ್ಧಿಗಾಗಿ ದುಡಿಯುತ್ತಿದೆ. ಇಂತಹ ಸಂಘಟನೆಯನ್ನು ತಾಲಿಬಾನ್‌ಗೆ ಹೋಲಿಸುವುದು ಖಂಡನೀಯ ಎಂದರು.
ಎಂ.ಬಿ.ಪಾಟೀಲ ವಿರುದ್ಧ ಬಿಜೆಪಿ ಜಿಲ್ಲಾಧ್ಯಕ್ಷ ವಾಗ್ದಾಳಿ ಇದೇ ವೇಳೆ, ಇತ್ತೀಚೆಗೆ ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಹಾಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಪಾಪದ ಮಂತ್ರಿ ಎಂದು ಲೇವಡಿ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೊಚಬಾಳ, ಸಚಿವ ಗೋವಿಂದ ಕಾರಜೋಳ ಅವರನ್ನು ಹೀಯಾಳಿಸುವುದು ಸರಿಯಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆ ಮೂಲಕ ಜಿಲ್ಲೆಗೆ ಕೆರೆಗಳಿಗೆ ನೀರು ಹರಿಸುವ ಕಾರ್ಯಕ್ರಮ ಬಿಜೆಪಿ ಸರ್ಕಾರವಿದ್ದಾಗ ಆರಂಭವಾಗಿದ್ದು, ಈಗ ಅದರ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆ ವರದಿ ತಯಾರಿಸಿ ಅಂದಿನ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲಿಸಿದ್ದಾಗ ಇದೇ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ವರದಿ ಎಂದು ತಿರಸ್ಕರಿಸಿತ್ತು. ಮುಂದೆ ಬಿಜೆಪಿ ಸರ್ಕಾರ ಬಂದ ಮೇಲೆ ಈ ಯೋಜನೆಗೆ 17ಸಾವಿರ ಕೋಟಿ ಬಿಜೆಪಿ ಮೀಸಲಿಟ್ಟಿತ್ತು ಎಂದು ಹೇಳಿದರು.