ವಿಜಯಪುರ: ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಬಳಿ ನಡೆದಿದೆ.
ಕಾರು ಅಪಘಾತ: ಬಿಜೆಪಿ ಮುಖಂಡ ವಿಜುಗೌಡ ಪಾಟೀಲರಿಗೆ ಗಾಯ - BJP leader Vijaygowda Patil car accident
ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಅವರ ಕಾರಿಗೆ ಎದುರಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು, ವಿಜುಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಾರು ಅಪಘಾತ
ಬಬಲೇಶ್ವರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ವಿಜಯಪುರಕ್ಕೆ ಬರುವ ವೇಳೆ ಅವರ ಕಾರಿಗೆ ಎದುರಿನಿಂದ ಬಂದ ಕಾರ್ ಡಿಕ್ಕಿಯಾಗಿದ್ದು, ವಿಜುಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನು ಎರಡೂ ಕಾರ್ ಜಖಂ ಆಗಿದ್ದು, ವಿಜುಗೌಡ ಪಾಟೀಲ ಎದೆಗೆ ಪೆಟ್ಟಾಗಿದೆ. ಅವರನ್ನು ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಘಟನೆ ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.