ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿ ಬಿಜೆಪಿ ಶಾಸಕರ ಕಾರು ಅಪಘಾತ - bjp mla basacaraj car accident

ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಚಲಿಸುತ್ತಿದ್ದ ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

bjp mla car accident
ಶಾಸಕರ ಕಾರು ಅಪಘಾತ

By

Published : Dec 18, 2019, 12:15 PM IST

ವಿಜಯಪುರ:ಬೈಕ್ ಸವಾರನೊಬ್ಬ ದಿಢೀರನೆ ಕಾರಿನ ಮುಂದೆ ಬಂದ ಕಾರಣ ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ ಅವರ ಕಾರು ಅಪಘಾತಕ್ಕೀಡಾದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೋಳಸಂಗಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ.

ಶಾಸಕರ ಕಾರು ಅಪಘಾತ

ಅಪಘಾತ ತಪ್ಪಿಸಲು ಹೋಗಿ ಶಾಸಕರ ಕಾರು ಚಾಲಕತಕ್ಷಣ ಬ್ರೇಕ್​ ಹಾಕಿದ್ದಾರೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಕಾರೊಂದು ಶಾಸಕರ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಶಾಸಕರ ಕಾರಿನ ಹಿಂಭಾಗ ಜಖಂಗೊಂಡಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.

ABOUT THE AUTHOR

...view details