ವಿಜಯಪುರ: 'ದಲಿತರು ಬಿಜೆಪಿಗೆ ಹೊಟ್ಟೆ ಪಾಡಿಗಾಗಿ ಹೋಗಿದ್ದಾರೆ' ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾಎಸ್ಸಿ ಮೋರ್ಚಾದಿಂದ ಇಂದು ಪ್ರತಿಭಟನೆ ನಡೆಸಲಾಯಿತು.
ವಿಜಯಪುರ: ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಎಸ್ಸಿ ಮೋರ್ಚಾ ಪ್ರತಿಭಟನೆ - Vijaypur
ವಿಪಕ್ಷ ನಾಯಕ ಸಿದ್ದರಾಮಯ್ಯ ದಲಿತ ಸಮುದಾಯದ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಎಸ್ಸಿ ಮೋರ್ಚಾದಿಂದ ಪ್ರತಿಭಟನೆ
ವಿಜಯಪುರ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ದಲಿತ ಸಮುದಾಯಕ್ಕೆ ಅವಹೇಳನ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜಕೀಯದಲ್ಲಿ ಹಾಳಾಗಿ ಹೋಗಲಿ. ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ ಎಂದು ಬೋರ್ಡ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.