ವಿಜಯಪುರ:ಕಾಂಗ್ರೆಸ್ ದೇಶದಲ್ಲಿ ಅಧಃಪತನ ಕಾಣುತ್ತಿದೆ. ಇದೇ ಕಾರಣಕ್ಕೆ ದೇಶದಲ್ಲಿ ಕೇವಲ 2 ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಉಳಿಸಿಕೊಂಡಿದೆ. ಬಿಜೆಪಿ 18 ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಿದೆ. ಎಲ್ಲ ರಾಜ್ಯದ ಚುನಾವಣೆಯಲ್ಲೂ ಬಿಜೆಪಿ ಗೆಲುವು ದಾಖಲಿಸುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವುದರ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ಇಂಡಿ ಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿಗೆ ಗೆಲುವಿನ ಟ್ರೆಂಡ್ ಇದೆ. ಕಾಂಗ್ರೆಸ್ಗೆ ಸೋಲಿನ ಟ್ರೆಂಡ್ ಇದೆ. 224 ವಿಧಾನಸಭೆ ಸದಸ್ಯರಲ್ಲಿ ಇಂಡಿ ಮತಕ್ಷೇತ್ರ ದಿಂದ ಒಬ್ಬ ಬಿಜೆಪಿ ಶಾಸಕರು ಇರಬೇಕು. ತಾವು ಎಲ್ಲರೂ ಕೈ ಜೋಡಿಸಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.