ಕರ್ನಾಟಕ

karnataka

ETV Bharat / state

'ಮುಸ್ಲಿಮರಿಗೆ ಅನ್ಯಾಯ ಮಾಡಿದ ಒಂದು ಉದಾಹರಣೆ ತೋರಿಸಿದ್ರೆ ರಾಜಕೀಯ ನಿವೃತ್ತಿ ಪಡೆಯುವೆ' - ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದ ಚುನಾವಣಾ ಪ್ರಚಾರ

ನಾನು ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ. ಪ್ರಧಾನಿ ಮತ್ತು ನಾವು ಮುಸ್ಲಿಮರಿಗೆ ಅನ್ಯಾಯ ಮಾಡಿರುವ ಒಂದು ಉದಾಹರಣೆ ಇದ್ರೆ ತೋರಿಸಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಸವಾಲು ಹಾಕಿದರು.

ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ

By

Published : Oct 21, 2021, 7:24 AM IST

ವಿಜಯಪುರ: 'ನನ್ನ ಅಧಿಕಾರಾವಧಿಯಲ್ಲಿ ಮುಸ್ಲಿಮರಿಗೆ ಸೌಲಭ್ಯ ಕೊಡದೇ ಕೇವಲ ಹಿಂದೂಗಳಿಗೆ ಮಾತ್ರ ಕೊಟ್ಟಿರುವುದು ಸಾಬೀತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ' ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ರಾಜಕೀಯ ಎದುರಾಳಿಗಳಿಗೆ ಸವಾಲೆಸೆದರು.

ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, 'ನಾನು ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ. ಬರುವ ಚುನಾವಣೆಯಲ್ಲಿ 135 ಸೀಟ್ ಗೆಲ್ಲುವ ಮೂಲಕ ಬಿಜೆಪಿ ಅಧಿಕಾರಕ್ಕೆ ತರಲು ನಾನು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇನೆ. ಗೋಲಗೇರಿಯಲ್ಲಿ ನನಗೆ ಬೃಹತ್ ಮೆರವಣಿಗೆ ಮೂಲಕ ಸ್ವಾಗತಿಸಿದ್ದು, ಇಲ್ಲಿ ನೆರೆದಿರುವ ಜನಸ್ತೋಮ‌ ನೋಡಿದ್ರೆ ನಾನು ಶಿಕಾರಿಪುರದಲ್ಲಿದ್ದೆನೋ ಅಥವಾ ಇಲ್ಲಿದ್ದೇನೋ ಎನಿಸಿತು' ಎಂದರು.

ಗೋಲಗೇರಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದ ಮಾಜಿ ಸಿಎಂ ಯಡಿಯೂರಪ್ಪ

'ಹಣದ ಬಲದಿಂದ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿರುವ ಕಾಂಗ್ರೆಸ್​ಗೆ ಜನ ಪಾಠ ಕಲಿಸಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸುವ ಮೂಲಕ ಕರ್ನಾಟಕದಲ್ಲೂ ಕಾಂಗ್ರೆಸ್​ಗೆ ಸ್ಥಳವಿಲ್ಲ ಎಂಬುದನ್ನು ತೋರಿಸಬೇಕಿದೆ' ಎಂದು ವಾಗ್ದಾಳಿ ನಡೆಸಿದರು.

'ಬಡವರ ಮನೆಯಲ್ಲಿ ಹೆಣ್ಣು ಹುಟ್ಟಿದಾಗ ಕಣ್ಣೀರು ಹಾಕಬಾರದು ಎಂದು ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದೇವೆ‌. ಯುವಕ, ಯುವತಿಯರು ಸ್ವಂತ ಉದ್ಯೋಗ ಮಾಡಬೇಕು ಎಂಬ ಕಾರಣಕ್ಕೆ ಬ್ಯಾಂಕ್​ನಲ್ಲಿ ಸಾಲ ಕೊಡುವ ವ್ಯವಸ್ಥೆಯನ್ನು ಮೋದಿ ಮಾಡಿದ್ದಾರೆ. ಪ್ರಧಾನಿ, ನಾವು ಮುಸ್ಲಿಮರಿಗೆ ಅನ್ಯಾಯ ಮಾಡಿರುವ ಒಂದು ಉದಾಹರಣೆ ಇದ್ರೆ ತೋರಿಸಿ, ಮುಸ್ಲಿಂ ಬಂಧುಗಳು ನಮ್ಮಿಂದ ದೂರ ನಿಂತಿದ್ದೀರಿ. ನೀವೆಲ್ಲಾ ಭೂಸನೂರ ಅವರಿಗೆ ಮತ ಹಾಕುವ ಮೂಲಕ ಅವರನ್ನು ಗೆಲ್ಲಿಸಿ. ಈ ಕ್ಷೇತ್ರದ ಅಭಿವೃದ್ಧಿ ಮಾಡುತ್ತಾರೆ' ಎಂದರು.

ABOUT THE AUTHOR

...view details