ವಿಜಯಪುರ :ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂದಗಿ ತಾಲೂಕಿನ ಮೋರಟಗಿ ಬೈಪಾಸ್ನ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ನಡೆದಿದೆ.
ಬಸ್ & ಲಾರಿ ಮುಖಾಮುಖಿ: ಓರ್ಒ ಸಾವು, ಐವರ ಸ್ಥಿತಿ ಗಂಭೀರ - kannada news
ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಬಸ್ ಮತ್ತು ಲಾರಿ ಮುಖಾಮಿಖಿಯಾಗಿರುವ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಬಸ್ ಮತ್ತು ಲಾರಿ ಡಿಕ್ಕಿಯಾದ ಘಟನೆ ನಡೆದಿದೆ
ಕಲಬುರಗಿಯಿಂದ ಸಾಂಗ್ಲಿಗೆ ತೆರಳುತ್ತಿದ್ದ ಬಸ್ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ನಲ್ಲಿದ್ದ ಓರ್ವ್ಯ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಗಾಯಗೊಂಡವರನ್ನ ಸಿಂದಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.