ವಿಜಯಪುರ: ಸರ್ಕಾರಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಹತ್ತಿರ ಘಟನೆ ಜರುಗಿದೆ. ಖೇಡಗಿ ಗ್ರಾಮದ ಕೆವಿಜಿ ಬ್ಯಾಂಕ್ ಮ್ಯಾನೇಜರ್ ಡಿ.ಎಸ್.ಬಿರಾದಾರ, ಕ್ಯಾಷಿಯರ್ ಚೈತನ್ಯ ಕುಮಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.