ಕರ್ನಾಟಕ

karnataka

By

Published : Jan 8, 2022, 9:57 PM IST

ETV Bharat / state

ಮುದ್ದೇಬಿಹಾಳದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ತಪ್ಪಿದ ಭಾರಿ ಅನಾಹುತ

ಮುದ್ದೇಬಿಹಾಳ ಪಟ್ಟಣದ ನಾಲತವಾಡ ರಸ್ತೆಯ ಕಡೆಗೆ ತೆರಳುತ್ತಿದ್ದ ಕಾರು ಏಕಾಏಕಿ ಬೈಪಾಸ್ ರಸ್ತೆಯಲ್ಲಿರುವ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರು ಪಲ್ಟಿ ಹೊಡೆದಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಮುದ್ದೇಬಿಹಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾಗಿರುವ ಘಟನೆ ಪಟ್ಟಣದ ತಾಳಿಕೋಟಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಪಟ್ಟಣದ ನಾಲತವಾಡ ರಸ್ತೆಯ ಕಡೆಗೆ ತೆರಳುತ್ತಿದ್ದ ಕಾರು ಏಕಾಏಕಿ ಬೈಪಾಸ್ ರಸ್ತೆಯಲ್ಲಿರುವ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದೆ. ಅಲ್ಪದರಲ್ಲಿಯೇ ಕಂಬದ ಮುಂದಿದ್ದ ವಿದ್ಯುತ್ ಪರಿವರ್ತಕಕ್ಕೆ(ಟ್ರಾನ್ಸ್​ಫಾರ್ಮರ್​) ಡಿಕ್ಕಿ ಹೊಡೆಯುವುದರಿಂದ ಕಾರು ಬಚಾವ್ ಆಗಿದೆ.

ಒಂದು ವೇಳೆ ಟಿಸಿಗೆ ಕಾರು ಡಿಕ್ಕಿ ಹೊಡೆದಿದ್ದರೆ ಕಾರಿನಲ್ಲಿದ್ದವರು ಸಜೀವವಾಗಿ ದಹನವಾಗುವ ಅಪಾಯವಿತ್ತು. ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

For All Latest Updates

TAGGED:

ABOUT THE AUTHOR

...view details