ವಿಜಯಪುರ:ಕಸಗೂಡಿಸುವ ವಿಚಾರವಾಗಿ ಅಕ್ಕಪಕ್ಕದ ಮನೆಯವರ ನಡುವೆ ನಡೆದ ಗಲಾಟೆಯಲ್ಲಿ ಹಲ್ಲೆಗೊಳಗಾದ ಮಹಿಳೆ ದಾಖಲಾಗಿರುವ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಭೇಟಿ ನೀಡಿ ಸಾಂತ್ವನ ಹೇಳಿದರು.
ಹಲ್ಲೆಗೊಳಗಾದ ಮಹಿಳೆಗೆ ಸಾಂತ್ವನ ಹೇಳಿದ ಮಹಿಳಾ ಆಯೋಗದ ಅಧ್ಯಕ್ಷೆ ಜಿಲ್ಲಾಸ್ಪತ್ರೆಯಲ್ಲಿ ಹಲ್ಲೆಗೊಳಗಾದ ಮಹಿಳೆ ರೂಪಾ ಇಂಚಗೇರಿಯವರನ್ನು ಭೇಟಿ ನೀಡಿ ಘಟನೆ ವಿವರ ಪಡೆದುಕೊಂಡರು. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಲ್ಲೆಗೊಳಗಾದ ಮಹಿಳೆ ರೂಪಾ ಇಂಚಗೇರಿ ಅಧ್ಯಕ್ಷೆ ಎದುರು ಮನವಿ ಮಾಡಿಕೊಂಡರು. ಈ ವೇಳೆ, ಆರೋಪಿಗಳನ್ನು ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸುವುದಾಗಿ ಮಹಿಳಾ ಆಯೋಗದ ಅಧ್ಯಕ್ಷೆ ಭರವಸೆ ನೀಡಿದರು.
ಕೇಸ್ ಕುರಿತು ಮಾಹಿತಿ ನೀಡಿದ ಎಸ್ಪಿ ಆನಂದ್ ಕುಮಾರ್ ದೂರು ದಾಖಲು:
ವಿಜಯಪುರ ನಗರದಲ್ಲಿ ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಎಸ್ಪಿ ಆದಂದ್ ಕುಮಾರ್ ಮಾಹಿತಿ ನೀಡಿದ್ದು, ಜಲನಗರ ಪೊಲೀಸ್ ಠಾಣೆಯಲ್ಲಿ ದಲಿತ ಸಮುದಾಯದ ಮಹಿಳೆ ರೂಪಾ ಇಂಚಗೇರಿ ವಕೀಲ ಖಾದ್ರಿ ಸೇರಿದಂತೆ ಇತರ ಮೂವರ ವಿರುದ್ಧ ದೂರು ನೀಡಿದ್ದಾರೆ.
ಪ್ರಕರಣವನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಕೇಸ್ನಲ್ಲಿ ಭಾಗಿಯಾದ ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಮಹಿಳೆ ಮೇಲೆ ಹಲ್ಲೆ ಹಾಗೂ ಅಟ್ರಾಸಿಟಿ ಕೇಸ್ ದಾಖಲು ಮಾಡಿಕೊಂಡು ತನಿಖೆ ಮಾಡಲಾಗುತ್ತಿದೆ ಎಂದರು.