ಕರ್ನಾಟಕ

karnataka

ETV Bharat / state

ಮೌಢ್ಯ ಧಿಕ್ಕರಿಸಿದ ಮಹಿಳಾ ನಾಯಕಿ.. ವಿಜಯಪುರ ಜಿಪಂ ಅಧ್ಯಕ್ಷೆ ಸುಜಾತಾರಿಂದ ಸ್ಮಶಾನ ವಾಸ್ತವ್ಯ.. - ವಿಜಯಪುರದಲ್ಲಿ ಮೌಢ್ಯತೆ ವಿರುದ್ಧ ಜಾಗೃತಿ

ಸ್ಮಶಾನದಲ್ಲಿ ಬೃಹತ್ ವೇದಿಕೆ ನಿರ್ಮಿಸಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ‌ಜುಮನಾಳ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಕೂಡ ಸ್ಮಶಾನ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಪಂಚಾಯತ್​ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡ ಮೇಲೆ ಸುಜಾತಾ ಕಳ್ಳಿಮನಿ ಗ್ರಾಮ ವಾಸ್ತವ್ಯ ಮಾಡಿದ್ದರು..‌

Cemetery stay by Vijaypur ZP President  Sujatha Kallimani
ಸ್ಮಶಾನದಲ್ಲಿ ನಡೆದ ಕಾರ್ಯಕ್ರಮ

By

Published : Mar 14, 2021, 10:08 PM IST

ವಿಜಯಪುರ : ಮೂಢನಂಬಿಕೆ, ಕಂದಾಚಾರದ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಪಂಚಾಯತ್​ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಅವರು ತಾಲೂಕಿನ ಜುಮನಾಳ ಗ್ರಾಮದ ಸ್ಮಶಾನದಲ್ಲಿ ವಾಸ್ತವ್ಯ ಹೂಡಿದರು.

ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ವಿವಿಧ ಸಮಾಜದ ಸ್ವಾಮೀಜಿಗಳು, ಜಿಲ್ಲಾ ಕಾಂಗ್ರೆಸ್ ಮುಖಂಡರು ಸುಜಾತಾ ಕಳ್ಳಿಮನಿಯವರಿಗೆ ಸಾಥ್ ನೀಡಿದರು.

ಸ್ಮಶಾನದಲ್ಲಿ ನಡೆದ ಕಾರ್ಯಕ್ರಮ

ಓದಿ : ಕಿಷ್ಕಿಂದ ಭವ್ಯ ಹನುಮ ಮಂದಿರ ನಿರ್ಮಾಣಕ್ಕಾಗಿ ದೇಶದಲ್ಲಿ 12 ವರ್ಷಗಳ ಕಾಲ ರಥಯಾತ್ರೆ..

ಸ್ಮಶಾನದಲ್ಲಿ ಬೃಹತ್ ವೇದಿಕೆ ನಿರ್ಮಿಸಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ‌ಜುಮನಾಳ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಕೂಡ ಸ್ಮಶಾನ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಪಂಚಾಯತ್​ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡ ಮೇಲೆ ಸುಜಾತಾ ಕಳ್ಳಿಮನಿ ಗ್ರಾಮ ವಾಸ್ತವ್ಯ ಮಾಡಿದ್ದರು. ‌ಇದೀಗ ರಾತ್ರಿ ಜುಮನಾಳ‌ ಗ್ರಾಮದ ಹೊರ ವಲಯದ ಸ್ಮಶಾನದಲ್ಲಿ ವಾಸ್ತವ್ಯ ಹೂಡಿ ಗಮನಸೆಳೆದಿದ್ದಾರೆ.

ABOUT THE AUTHOR

...view details