ವಿಜಯಪುರ: ಬಾಕಿ ವೇತನ, ಲಾಕ್‌ಡೌನ್ ಸಂತ್ರಸ್ತರಿಗೆ ಪರಿಹಾರ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಿಐಟಿಯು ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು ಹಾಗೂ ಇತರ ಸಂಘಟನೆಗಳು ಜಂಟಿ ಹೋರಾಟ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೊರೊನಾ ವೈರಸ್ ಭೀತಿಯಿಂದ ಸಂಘಟಿತ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದೆ. ಅಲ್ಲದೇ ಅಂಗನವಾಡಿ, ಹಾಸ್ಟೆಲ್ ನೌಕಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಕಳೆದ ಹಲವು ತಿಂಗಳಿಂದ ವೇತನ ಪಾವತಿ ಮಾಡಿಲ್ಲ. ಕುಟುಂಬ ನಿರ್ವಹಣೆ ಮಾಡಲು ಹೆಣಗಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ -19 ವೈರಸ್ ತಡೆಗೆ ಹೋರಾಟ ನಡೆಸುತ್ತಿರುವ ಕಾರ್ಯಕರ್ತೆಯರಿಗೆ ಸರ್ಕಾರ ಆರೋಗ್ಯ ರಕ್ಷಣಾ ಕಿಟ್ ಕೂಡ ವಿತರಣೆ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಇನ್ನು ಸರ್ಕಾರ ಹೊಸ ಶಿಕ್ಷಣ ನೀತಿ ಜಾರಿ ಮಾಡಿರುವುದಿಂದ ಅಂಗನವಾಡಿ ಕಾರ್ಯಕರ್ತೆಯರು ಉದ್ಯೋಗ ಕಳೆದುಕೊಳ್ಳುವಂತಾಗುತ್ತದೆ. ತಕ್ಷಣವೇ ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ಜಾರಿ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ರು.
ಇತ್ತ ಅದೆಷ್ಟೋ ಅಸಂಘಟಿತ ಕಾರ್ಮಿಕರು ಕೊರೊನಾ ಹೊಡೆತಕ್ಕೆ ಸಿಲುಕಿ ನಲುಗುತ್ತಿವೆ. ಅನೇಕ ಜನರು ಉದ್ಯೋಗ ಕಳೆದುಕೊಳ್ಳುವಂತಾಗಿದೆ. ಸರ್ಕಾರ ಅಸಂಘಟಿತ ವಲಯದ ಕಾರ್ಮಿಕರ ನೆರವಿಗೆ ಬರಬೇಕು, ಕಡಿಮೆ ವೇತನ ದುಡಿಯುವ ಜನರ ಬಾಕಿ ವೇತನ ಪಾವತಿಗೆ ಮುಂದಾಗುವಂತೆ ಹಾಗೂ ಜನ ವಿರೋಧಿ ನೀತಿ ಕೈ ಬಿಡುವಂತೆ, ಇತರ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.