ಕರ್ನಾಟಕ

karnataka

ETV Bharat / state

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ತಕ್ಷಣ ವಾಪಸ್ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಹಾಗೂ ಎನ್ಎಸ್​ಯುಐ ಘಟಕದ ಪದಾಧಿಕಾರಿಗಳು ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

Muddebihala
Muddebihala

By

Published : Aug 21, 2020, 12:31 AM IST

ಮುದ್ದೇಬಿಹಾಳ:ಬಿಜೆಪಿ ಸರ್ಕಾರವು ರೈತ ವಿರೋಧಿ ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ತಕ್ಷಣ ವಾಪಸ್ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಹಾಗೂ ಎನ್ಎಸ್​ಯುಐ ಘಟಕದ ಪದಾಧಿಕಾರಿಗಳು ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಹಶೀಲ್ದಾರರ ಕಚೇರಿಗೆ ಆಗಮಿಸಿದ ಕಾಂಗ್ರೆಸ್ ಪದಾಧಿಕಾರಿಗಳು, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ವೇಳೆ ಮಾತನಾಡಿದ ಎಪಿಎಂಸಿ ನಿರ್ದೇಶಕ ವಾಯ್.ಹೆಚ್.ವಿಜಯಕರ್, ರಾಜ್ಯ ಅತಿವೃಷ್ಟಿಯಿಂದ ಆಗಿರುವ ತೀವ್ರ ಹಾನಿಗೆ ಪರಿಹಾರ ಒದಗಿಸಲು ವಿಫಲವಾಗಿರುವ ಸರ್ಕಾರದ ನಿಲುವನ್ನು ಖಂಡಿಸುತ್ತೇವೆ. ಕೊರೊನಾ ಪರಿಸ್ಥಿತಿ ನಿಯಂತ್ರಣಕ್ಕೆ ವಿಫಲವಾಗಿರುವ ಹಾಗೂ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಮಹ್ಮದ ರಫೀಕ ಶಿರೋಳ ಮನವಿ ಪತ್ರ ಓದಿದರು. ತಹಶೀಲ್ದಾರ್ ಜಿ.ಎಸ್.ಮಳಗಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಚಿನ್ನು ನಾಡಗೌಡ, ಎನ್​ಎಸ್​ಯುಐ ಜಿಲ್ಲಾಧ್ಯಕ್ಷ ಸದ್ದಾಂ ಕುಂಟೋಜಿ, ಉಪಾಧ್ಯಕ್ಷ ಯೂಸೂಫ ನಾಯ್ಕೋಡಿ, ಪುರಸಭೆ ಸದಸ್ಯರಾದ ಮಹಿಬೂಬ ಗೂಳಸಂಗಿ, ರಿಯಾಜ ಢವಳಗಿ, ಎಸ್ಸಿ ಘಟಕದ ಅಧ್ಯಕ್ಷ ಅಶೋಕ ಅಜಮನಿ, ಪುರಸಭೆ ಮಾಜಿ ಸದಸ್ಯ ಕಾಮರಾಜ ಬಿರಾದಾರ, ಬುಡ್ಡಾ ನಾಯ್ಕೋಡಿ, ಹರೀಶ ಬೇವೂರ, ಪ್ರಶಾಂತ ತಾರನಾಳ, ಅಸ್ಪಾಕ ನಾಡಗೌಡ, ಸಂಗಣ್ಣ ಮೇಲಿನಮನಿ, ಸಿದ್ದನಗೌಡ ಬಿರಾದಾರ, ರಂಜಾನ ನದಾಫ, ಶರಣು ಚಲವಾದಿ, ಮಾನಪ್ಪ ನಾಯಕ, ಮಹಿಬೂಬ ಮೊಕಾಶಿ, ಹುಸೇನ ಮುಲ್ಲಾ, ದಾವಲ್ ಗೂಳಸಂಗಿ, ಆರೀಫ್ ವಾಲೀಕಾರ, ಜಗದೀಶ ದೊಡಮನಿ, ಹನೀಫ ನಾಗೂರ, ಯಾಸೀನ್ ಬಾಗವಾನ ಇದ್ದರು.

ABOUT THE AUTHOR

...view details