ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ - Vijayapur protest news
ದಿನದಿಂದ ದಿನಕ್ಕೆ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಿದ್ರೂ ಕೇಂದ್ರ ಸರ್ಕಾರ ಮಾತ್ರ ಇಂಧನ ಬೆಲೆ ಹೆಚ್ಚಿಸುತ್ತಿದೆ..
![ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ Congress Activists Protest](https://etvbharatimages.akamaized.net/etvbharat/prod-images/768-512-7816417-thumbnail-3x2-viji.jpg)
ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ವಿಜಯಪುರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.
ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಕೊರೊನಾ ಲಾಕ್ಡೌನ್ನಿಂದ ಜನರು ತತ್ತರಿಸಿದ್ದಾರೆ. ಜೀವನ ನಡೆಸಲು ಆಗುತ್ತಿಲ್ಲ. ಈ ಸಂದರ್ಭದಲ್ಲಿ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಕೇಂದ್ರ ಬಿಜೆಪಿ ಸರ್ಕಾರ ಅಭಿವೃದ್ಧಿಯ ಆಡಳಿತ ನೀಡಲು ವಿಫಲವಾಗಿದೆ. ಸುಳ್ಳು ಭರವಸೆಗಳ ಮೂಲಕ ಜನರಿಗೆ ಮೋಸ ಮಾಡುತ್ತಿದೆ.
ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಡಿಮೆ ಬೆಲೆ ಮಾರಾಟವಾಗುವ ಪೆಟ್ರೋಲ್, ಡೀಸೆಲ್ ಬೆಲೆಗಳ ಅನುಗುಣವಾಗಿ ದೇಶದಲ್ಲಿ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಕಾರ್ಯಕರ್ತರು ಮನವಿ ಸಲ್ಲಿಸಿದರು.