ಕರ್ನಾಟಕ

karnataka

ETV Bharat / state

ಹಥ್ರಾಸ್​ ಅತ್ಯಾಚಾರ, ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಪ್ರತಿಭಟನೆ - ಯುವತಿ ಮೇಲಿನ ಅತ್ಯಚಾರ

ಉತ್ತರಪ್ರದೇಶ ಬಿಜೆಪಿ ಸರ್ಕಾರದ ದೌರ್ಜನ್ಯ ನೀತಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Congress committee activists protest against bjp governament
ಹಥ್ರಾಸ್​ ಅತ್ಯಚಾರ, ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಪ್ರತಿಭಟನೆ

By

Published : Oct 7, 2020, 12:35 PM IST

ವಿಜಯಪುರ:ಹಥ್ರಾಸ್​ನಲ್ಲಿ ದಲಿತ ಯುವತಿ ಮೇಲಿನ ಅತ್ಯಾಚಾರ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹಥ್ರಾಸ್​ ಅತ್ಯಾಚಾರ, ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಪ್ರತಿಭಟನೆ

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟಿಸಿದ ಕಾರ್ಯಕರ್ತರು, ಉತ್ತರಪ್ರದೇಶದಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿದ್ದರೂ ಸಿಎಂ ಯೋಗಿ ಆದಿತ್ಯನಾಥ್​ ಸರ್ಕಾರ ಮಾತ್ರ ಕಂಡೂ ಕಾಣದಂತಿದೆ. ಕೃತ್ಯದಲ್ಲಿ ಭಾಗಿಯಾದವರ ಪರವಾಗಿ ನಿಂತು ಅತ್ಯಚಾರ ಪ್ರಕರಣ ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ರಾಜ್ಯದಲ್ಲಿ ಕೂಡ ಬಿಜೆಪಿ ಸರ್ಕಾರ ಸೇಡಿನ ರಾಜಕಾರಣ ಮಾಡಲು ಮುಂದಾಗಿದ್ದು, ಡಿ.ಕೆ.ಶಿವಕುಮಾರ್​ ಮನೆ‌ ಮೇಲೆ ದಾಳಿ ಮಾಡಿಸಿದೆ. ಕೇಂದ್ರ ಬಿಜೆಪಿ ಸರ್ಕಾರ ಸಿಬಿಐಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಿಜೆಪಿ ಸರ್ಕಾರಗಳು ತಮ್ಮ ಆಡಳಿತ ವೈಫಲ್ಯತೆ ಮುಚ್ಚಲು ಹಾಗೂ ರಾಜ್ಯದ ನಾಯಕರ ಮೇಲೆ ಪ್ರಭಾವ ಕುಗ್ಗಿಸಲು ಇಡಿ, ಸಿಬಿಐ ದಾಳಿ ಮಾಡಿಸುತ್ತಿವೆ.

ಸರ್ಕಾರ ಸೇಡಿನ‌ ರಾಜಕಾರಣ ಮಾಡುವುದನ್ನು ಬಿಟ್ಟು ಜನಪರ ಆಡಳಿತ ಹಾಗೂ ಅತ್ಯಾಚಾರಕ್ಕೆ ಒಳಗಾದ ಹಥ್ರಾಸ್​ ಯುವತಿ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.

ABOUT THE AUTHOR

...view details