ವಿಜಯಪುರ: ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿ ಸದಸ್ಯರನ್ನು ಹೈಜಾಕ್ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಜನಜಂಗುಳಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ.
ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ - lati charge
ವಿಜಯಪುರದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿಯ ಸದಸ್ಯರನ್ನು ಹೈಜಾಕ್ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಜಿಲ್ಲಾ ಪಂಚಾಯತ್ನ 42 ಸದಸ್ಯರಲ್ಲಿ ಅಧ್ಯಕ್ಷ ಸ್ಥಾನ ಪಡೆಯಲು 22 ಸ್ಥಾನಗಳ ಅವಶ್ಯಕತೆಯಿದೆ. ಬಿಜೆಪಿ 20, ಕಾಂಗ್ರೆಸ್ 18, ಜೆಡಿಎಸ್ 3 ಹಾಗೂ ಪಕ್ಷೇತರ ಒಬ್ಬ ಸದಸ್ಯನಿದ್ದಾನೆ. ಇಂದು ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿಯ ನಾಲ್ವರು ಸದಸ್ಯರನ್ನು ಹೈಜಾಕ್ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಯಿತು. ಈ ವೇಳೆ ಅವರನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಈ ಸಂದರ್ಭದಲ್ಲಿ ದೇವರ ಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಮಾತನಾಡಿ, ಕಾಂಗ್ರೆಸ್ ಮುಖಂಡರು, ಜಿಲ್ಲಾಡಳಿತದ ವಿರುದ್ಧ ಕಿಡಿಕಾರಿದರು.