ವಿಜಯಪುರ: ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್ ಭೇಟಿ ನೀಡಿ ಸಂತ್ರಸ್ತರ ಸಂಕಷ್ಟ ಕೇಳಿದರು.
ಪ್ರವಾಹ ಪೀಡಿತ ಗ್ರಾಮಗಳಿಗೆ ಕಾಂಗ್ರೆಸ್ ಮುಖಂಡ ಎಸ್.ಆರ್ ಪಾಟೀಲ್ ಭೇಟಿ... - SR Patil visited flood affected areas
ವಿಜಯಪುರ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್ ಭೇಟಿ ನೀಡಿ ಸಂತ್ರಸ್ತರ ಸಂಕಷ್ಟ ಆಲಿಸಿದರು.
ಕಾಂಗ್ರೆಸ್ ಮುಖಂಡ ಎಸ್.ಆರ್ ಪಾಟೀಲ್
ಚಡಚಣ, ಇಂಡಿ, ಆಲಮೇಲ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಮೊದಲು ಭೇಟಿ ನೀಡಿದರು. ನಂತರ ಚಡಚಣ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿದ ಎಸ್.ಆರ್ ಪಾಟೀಲ ಪ್ರವಾಹದ ಕುರಿತು ಮಾಹಿತಿ ಕಲೆ ಹಾಕಿದರು. ಪ್ರವಾಹದ ವೇಳೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.
ಕೂಡಲೇ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡವರಿಗೆ ಹಾಗೂ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಬಳಿಕ ಇಂಡಿ ಹಾಗೂ ಆಲಮೇಲ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳತ್ತ ಪ್ರಯಾಣ ಬೆಳೆಸಿದರು.