ವಿಜಯಪುರ:ಜನ ವಿರೋಧಿ ಯೋಜನೆಗಳನ್ನೇ ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಆರೋಪಿಸಿ ಕಾಂಗ್ರೆಸ್ ಯುವ ಸಮಿತಿ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಯುವ ಸಮಿತಿ ಪ್ರತಿಭಟನೆ
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಯುವ ಸಮಿತಿ ನಗರದ ಅಂಬೇಡ್ಕರ್ ವೃತ್ತದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು.
ಕಾಂಗ್ರೆಸ್ ಯುವ ಸಮಿತಿ ಪ್ರತಿಭಟನೆ
ನಗರದ ಅಂಬೇಡ್ಕರ್ ವೃತ್ತದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಸರ್ಕಾರ ಎರಡು ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತ್ರಿವಳಿ ತಲಾಖ್, ಪೌರತ್ವ ನೋಂದಣಿ ಸೇರಿದಂತೆ ಅನೇಕ ಯೋಜನೆಗಳು ದೇಶದ ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಕಾಯ್ದೆಗಳನ್ನು ಜಾರಿ ಮಾಡುತ್ತಿದೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಯುವಕರು ಉದ್ಯೋಗವಿಲ್ಲದೆ, ಅಲೆಯುತ್ತಿದ್ದಾರೆ ಎಂದು ಆರೋಪಿಸಿದರು.