ವಿಜಯಪುರ: ಭಾರತ ಗಡಿಯಲ್ಲಿ ಪುಂಡಾಟಿಕೆ ಮೆರೆಯುತ್ತಿರುವ ಚೀನಾಗೆ ತಕ್ಕ ಉತ್ತರ ನೀಡುವಂತೆ ಹಾಗೂ ದೇಶದಲ್ಲಿ ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಆಗ್ರಹಿಸಿ ಪ್ರತಿಭಟನೆ - India china news
ಭಾರತೀಯ ಸೈನಿಕರನ್ನು ಹತ್ಯೆಗೈದ ಚೀನಾಗೆ ತಕ್ಕ ಪಾಠ ಹೇಳಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ವಿಜಯಪುರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಆಗ್ರಹಿಸಿ ಪ್ರತಿಭಟನೆ
ಗಾಲ್ವನ್ ಪ್ರದೇಶದಲ್ಲಿ ಚೀನಾ ಅಶಾಂತಿ ಉಂಟು ಮಾಡುತ್ತಿದೆ. ಆ ದೇಶದ ಇಂಥ ಕೃತ್ಯಗಳನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಭಾರತೀಯ ಸೈನಿಕರನ್ನು ಹತ್ಯೆ ಮಾಡಿರುವ ಚೀನಾಗೆ ತಕ್ಕ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಈ ವೇಳೆ ಆಗ್ರಹಿಸಲಾಯಿತು.