ಕರ್ನಾಟಕ

karnataka

ETV Bharat / state

ಜೆಎನ್​ಯು ಹಿಂಸಾಚಾರಕ್ಕೆ ಖಂಡನೆ... ವಿಜಯಪುರ ಯುವ ಕಾಂಗ್ರೆಸ್​ ಪ್ರತಿಭಟನೆ - Congress protest in Vijayapura over JNU violence

ದೆಹಲಿಯ ಜೆಎನ್‌ಯು ಕ್ಯಾಂಪಸ್​ನಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಯುವ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

congress-protest-in-vijayapura
ವಿಜಯಪುರ ಯುವ ಕಾಂಗ್ರೆಸ್​ ಪ್ರತಿಭಟನೆ

By

Published : Jan 9, 2020, 5:42 PM IST

ವಿಜಯಪುರ:ದೆಹಲಿಯ ಜೆಎನ್‌ಯು ಕ್ಯಾಂಪಸ್​ನಲ್ಲಿ ನಡೆದ ಹಿಂಸಾಚಾರ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಯುವ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕೈ ಕಾರ್ಯಕರ್ತರು, ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದರು. ಜೆಎನ್‌ಯುನಲ್ಲಿ ಎಬಿವಿಪಿ ಕಾರ್ಯಕರ್ತರು ಗೂಂಡಾ ವರ್ತನೆ ತೋರಿ, ಅಮಾಯಕ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದರು‌.

ಅಲ್ಲಿನ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಮೇಲೆ ಹಲ್ಲೆ ಮಾಡಿದ್ದು ಸರಿಯಲ್ಲ. ಇದಕ್ಕೆಲ್ಲಾ ಬಿಜೆಪಿ ಪರೋಕ್ಷವಾಗಿ ಕಾರಣವಾಗಿದೆ ಎಂದು ಆರೋಪಿಸಿದರು.

ವಿಜಯಪುರ ಯುವ ಕಾಂಗ್ರೆಸ್​ ಪ್ರತಿಭಟನೆ

ಇನ್ನು, ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಕಾರಣವಾದ ವ್ಯಕ್ತಿಗಳನ್ನು ಶೀಘ್ರವೇ ಬಂಧಿಸುವಂತೆ, ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ABOUT THE AUTHOR

...view details