ಕರ್ನಾಟಕ

karnataka

ETV Bharat / state

ವಿಜಯಪುರ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ - ಅಮಿತ್​​ ಶಾ, ನರೇಂದ್ರ ಮೋದಿ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ

ಬಿಜೆಪಿ‌ ಸರ್ಕಾರ ದೇಶದ ನಾಗರಿಕರಲ್ಲಿ ಕೋಮು ಗಲಭೆ ಸೃಷ್ಟಿಸಿ ಆತಂಕ ಮೂಡಿಸುತ್ತಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು‌‌‌‌.

Congress protests against central BJP government
ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

By

Published : Mar 1, 2020, 3:29 PM IST

ವಿಜಯಪುರ: ಬಿಜೆಪಿ‌ ಸರ್ಕಾರ ದೇಶದ ನಾಗರಿಕರಲ್ಲಿ ಕೋಮು ಗಲಭೆ ಸೃಷ್ಟಿಸಿ ಆತಂಕ ಮೂಡಿಸುತ್ತಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು‌‌‌‌.

ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ನಗರದ ಅಂಬೇಡ್ಕರ್ ವೃತ್ತದಲ್ಲಿ ಸಂಘಟನೆಗೊಂಡ ಕಾರ್ಯಕರ್ತರು, ಬಿಜೆಪಿ ಸರ್ಕಾರ, ಅಮಿತ್​​ ಶಾ, ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಜನ‌ ವಿರೋಧಿ ನೀತಿಗಳನ್ನ ಜಾರಿಗೆ ತಂದು ದೇಶವಾಸಿಗಳ ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತಿದೆ. ದೆಹಲಿಯಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಅನೇಕ ಸಾವು ನೋವುಗಳು ಸಂಭವಿಸಿ ಹಲವು ಜನ ಪ್ರಾಣ ಕಳೆದುಕೊಳ್ಳುವಂತಾಗಿದೆ. ವೃದ್ಧೆಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ ಎಂದು ಕಿಡಿ‌ಕಾರಿದರು‌.

ಗೃಹ ಸಚಿವ ಅಮಿತ್​​​​ ಶಾ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಯುವ ಸಮಿತಿ ಕಾರ್ಯಕರ್ತರು ಒತ್ತಾಯಿಸಿದರು. ಇನ್ನು ಅಮಿತ್​​​ ಶಾ ಭಾವಚಿತ್ರ ದಹನ ಮಾಡಿದ ವಿಚಾರವಾಗಿ ಕೆಲ‌ಕಾಲ‌ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು.

ABOUT THE AUTHOR

...view details