ಕರ್ನಾಟಕ

karnataka

ETV Bharat / state

ಕಾಂಗ್ರೆಸ್​​ನಿಂದ ಪಕ್ಷಾಂತರಗೊಂಡ ಜಿ.ಪಂ. ಸದಸ್ಯರ ವಿರುದ್ಧ ಪ್ರತಿಭಟನೆ - ವಿಜಯಪುರ ಜಿ.ಪಂ ಸದಸ್ಯರ ವಿರುದ್ಧ ಪ್ರತಿಭಟನೆ ಸುದ್ದಿ

ನಮ್ಮ ಪಕ್ಷದ ಸದಸ್ಯರಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದವರು ಆಮಿಷಗಳನ್ನ ಒಡ್ಡಿ ಕುದುರೆ ವ್ಯಾಪಾರ ಮಾಡಿದ್ದಾರೆ ಎಂದು ಕಾಂಗ್ರೆಸ್​ ಆರೋಪಿಸಿದೆ.

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

By

Published : Jul 3, 2020, 1:42 PM IST

ವಿಜಯಪುರ: ಜಿಲ್ಲಾ ಪಂಚಾಯತ್​​​ ಅಧ್ಯಕ್ಷೀಯ ಚುನಾವಣೆಯಲ್ಲಿ ಬೇರೆ ಪಕ್ಷಕ್ಕೆ ಬೆಂಬಲ ಸೂಚಿಸಿದ 3 ಜನ ಜಿಲ್ಲಾ ಪಂಚಾಯತ್ ಸದಸ್ಯರ ಭಾವಚಿತ್ರಗಳ‌ನ್ನ ದಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ನಗರದ ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿ ನಮ್ಮ ಪಕ್ಷದ ಸದಸ್ಯರಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದವರು ಆಮಿಷಗಳನ್ನ ಒಡ್ಡಿ ಕುದುರೆ ವ್ಯಾಪಾರ ಮಾಡಿದ್ದಾರೆ. ಬಿಜೆಪಿಯವರು ನಮ್ಮ ಪಕ್ಷದ ಜಿಲ್ಲಾ ಪಂಚಾಯತ್​​ ಸದಸ್ಯರಿಗೆ ಹಣದಾಸೆ ತೋರಿಸಿ ತಮ್ಮ ಪರವಾಗಿ ಮತ ಚಲಾಯಿಸಿಕೊಂಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

ಇನ್ನು ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಪಕ್ಷದವರು ಆಪರೇಷನ್ ಕಮಲದ ಮೂಲಕ ಪ್ರಜಾಪ್ರಭುತ್ವ ವಿರೋಧಿ ಹಾದಿ ತುಳಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಧ್ಯಕ್ಷೀಯ ಚುನಾವಣೆಯಲ್ಲಿ ಬೇರೆ ಪಕ್ಷಕ್ಕೆ ಬೆಂಬಲ ಸೂಚಿಸಿದ ಅಭ್ಯರ್ಥಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಪಕ್ಷ ಮುಂದಾಗಿದೆ ಎಂದರು.

ABOUT THE AUTHOR

...view details