ವಿಜಯಪುರ:ವಿಜಯಪುರದಲ್ಲಿ ಕೊರೊನಾ ಸೋಂಕಿತೆಯ ಪತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಷ್ಟಾಚಾರದಂತೆ ಅಂತ್ಯಕ್ರಿಯೆಯನ್ನು ಜಿಲ್ಲಾಡಳಿತ ಮಾಡಿದೆ.
ಕೊರೊನಾ ಸೋಂಕಿತೆಯ ಪತಿ ಸಾವು...ವೈದ್ಯಕೀಯ ಶಿಷ್ಟಾಚಾರದಂತೆ ಅಂತ್ಯಕ್ರಿಯೆ - ವಿಜಯಪುರದಲ್ಲಿ ಕೊರೊನಾ ಸೋಂಕಿತೆಯ ಪತಿ ಸಾವು
ವಿಜಯಪುರದಲ್ಲಿ ಮೃತಪಟ್ಟ ಕೊರೊನಾ ಸೋಂಕಿತೆಯ ಪತಿಯ ಅಂತ್ಯಕ್ರಿಯೆಯನ್ನು ವೈದ್ಯಕೀಯ ಶಿಷ್ಟಾಚಾರದಂತೆ ಜಿಲ್ಲಾಡಳಿತವೇ ಮಾಡಿದೆ.
ವೈದ್ಯಕೀಯ ಶಿಷ್ಟಾಚಾರದಂತೆ ಅಂತ್ಯಕ್ರಿಯೆ
ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ಪೂರ್ಣಗೊಂಡಿದೆ. ಸೋಂಕಿತೆಯ ಪತಿ 69 ವರ್ಷದ ವ್ಯಕ್ತಿ ನಿನ್ನೆ ಮೃತಪಟ್ಟಿದ್ದರು. ಈ ವ್ಯಕ್ತಿಗೂ ಕೊರೊನಾ ಸೋಂಕಿನ ಶಂಕೆಯ ವ್ಯಕ್ತವಾಗಿತ್ತು. ಆದರೆ, ಇನ್ನೂ ವರದಿ ಬಂದಿಲ್ಲ, ಈ ಹಿನ್ನೆಲೆ ಮೃತ ವ್ಯಕ್ತಿಯ ಒಂದಿಬ್ಬರು ಸಂಬಂಧಿಕರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಧಾರ್ಮಿಕ ವಿಧಿವಿಧಾನಗಳಂತೆ ಬೆಳಗಿನ ಜಾವ 4 ಗಂಟೆಗೆ ಅಂತ್ಯಕ್ರಿಯೆಯನ್ನು ಜಿಲ್ಲಾಡಳಿತ ಪೂರ್ಣಗೊಳಿಸಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.