ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿಂದು 158 ಕೊರೊನಾ ಸೋಂಕಿತರು ಪತ್ತೆ - ವಿಜಯಪುರ: ಜಿಲ್ಲೆಯಲ್ಲಿಂದು 158 ಜನರಿಗೆ ಕೋವಿಡ್​ ಕೇಸ್​ ದೃಢ

ಇಂದು ಕೊರೊನಾದಿಂದ 185 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 3,780 ಜನ ಗುಣಮುಖರಾಗಿದ್ದಾರೆ.

Vijayapura
ವಿಜಯಪುರದಲ್ಲಿಂದು 158 ಕೊರೊನಾ ಸೋಂಕು ಪತ್ತೆ

By

Published : Aug 16, 2020, 10:41 PM IST

ವಿಜಯಪುರ: ಜಿಲ್ಲೆಯಲ್ಲಿಂದು 158 ಜನರಿಗೆ ಕೋವಿಡ್​ ಕೇಸ್​ ದೃಢಪಟ್ಟಿದೆ. ನಿನ್ನೆ 254 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಇಲ್ಲಿಯವರೆಗೆ ಜಿಲ್ಲೆಯಲ್ಲಿ 4870 ಜನರಿಗೆ ಸೋಂಕು ತಗುಲಿದೆ.

ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ವೃದ್ಧೆಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ 54 ಕ್ಕೆ ಏರಿದೆ. ಜಿಲ್ಲೆಯ ನಿವಾಸಿಗಳಾದ ರೋಗಿ‌ ನಂ: 209836, 62 ವರ್ಷದ ವ್ಯಕ್ತಿ ತೀವ್ರ ಉಸಿರಾಟದ ತೊಂದರೆಯಿಂದ ಆ.5ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆ.15 ರಂದು ಮೃತಪಟ್ಟಿದ್ದಾರೆ.

ರೋಗಿ ನಂ: 128462, 68 ವರ್ಷದ ವೃದ್ಧೆ ತೀವ್ರ ಉಸಿರಾಟದ ತೊಂದರೆಯಿಂದ ಜು.22 ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಆ. 10 ರಂದು ಮೃತಪಟ್ಟಿದ್ದಾರೆ.

ರೋಗಿ ನಂ: 190480, 65 ವರ್ಷದ ವೃದ್ಧೆ ತೀವ್ರ ಉಸಿರಾಟಿನ ತೊಂದರೆಯಿಂದ ಆ.8 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದ ಆ. 9 ರಂದು ಮೃತಪಟ್ಟಿದ್ದಾರೆ. ಇವರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 1,036 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇಲ್ಲಿಯವರೆಗೆ 43,684 ಜನರ ಮೇಲೆ ನಿಗಾ ಇಡಲಾಗಿದೆ. 60,518 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 54,821 ಜನರ ವರದಿ ನೆಗಟಿವ್ ಆಗಿದೆ. 4,870 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 829 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ABOUT THE AUTHOR

...view details